ಹೊಸದಿಗಂತ ಡಿಜಿಟಲ್ ಡೆಸ್ಕ್:
ಸದ್ಯ ಅಮೆರಿಕಾದಲ್ಲಿ ಶಿವರಾಜ್ ಕುಮಾರ್ ಚಿಕಿತ್ಸೆ ಪಡೆಯುತ್ತಿದ್ದು, ಇತ್ತ ಮನೆಯಲ್ಲಿ ಅವರ ಮುದ್ದಿನ ಶ್ವಾನ ಅವರನ್ನು ಅಗಲಿದೆ.
ಅಗಲಿದ ನೆಚ್ಚಿನ ಶ್ವಾನದ ಕುರಿತು ಗೀತಾ ಶಿವರಾಜ್ಕುಮಾರ್ ಭಾವನಾತ್ಮಕ ಪತ್ರ ಬರೆದಿದ್ದಾರೆ.
ನಮ್ಮ ಮನೆಯಲ್ಲಿ ನಾವು ಐದು ಜನರಿಲ್ಲ, ಆರು ಜನರಿದ್ದೇವೆ. ಪ್ರೀತಿಯ ನೀಮೋವನ್ನು ನಾವು ಮನೆಯ ಸದ್ಯಸ್ಯನನ್ನಾಗಿ ಪರಿಗಣಿಸಿದ್ದೆವು. ಶಿವಣ್ಣ ಅಮೆರಿಕಾದಲ್ಲಿ ಚಿಕಿತ್ಸೆ ಪಡೆಯುವಾಗ ನೀಮೋ ದೇವರ ಹತ್ತಿರ ಹೋಗಿದ್ದಾನೆ. ಅವನ ನಿಸ್ವಾರ್ಥ ಪ್ರೀತಿಯನ್ನು ಯಾರಿಂದಲೂ ಕೂಡ ತುಂಬಲು ಸಾಧ್ಯವಿಲ್ಲ. ನಾವು ಅಮೆರಿಕಾಗೆ ಬಂದ ಮೇಲೆ ಅವನು ಹೊರಡಬೇಕು ಎಂದು ನಿರ್ಧರಿಸಿದ್ದ ಎನಿಸುತ್ತೆ ಎಂದು ದುಃಖ ವ್ಯಕ್ತಪಡಿಸಿದ್ದಾರೆ.
ಗೀತಾ ಶಿವರಾಜ್ಕುಮಾರ್ ಬರೆದಿರುವ ಸುದೀರ್ಘ ಪತ್ರದಲ್ಲಿ ನಿಮೋ ಅವರೊಂದಿಗೆ ಹೇಗಿದ್ದ. ಎಷ್ಟು ಹಚ್ಚಿಕೊಂಡಿದ್ದ ಎಂಬುದರ ಸಂಪೂರ್ಣವಾಗಿ ಅದರೊಂದಿಗಿನ ನೆನಪುಗಳಿಗೆ ಅಕ್ಷರರೂಪ ಕೊಟ್ಟಿದ್ದಾರೆ. ಕೊನೆಗೆ ನೀಮೋ ಸದಾ ನಮ್ಮೊಳಗೆ ಇದ್ದಾನೆ, ನನ್ನೊಳಗೆ ಇದ್ದಾನೆ, ಯಾವಾಗಲೂ ಇರ್ತಾನೆ ಎಂದು ಬರೆದಿದ್ದಾರೆ .
ಅವನು ಹೋಗಿದ್ದನ್ನು ನಾನು ಕಣ್ಣಿಂದ ನೋಡಲಿಲ್ಲ. ನೋಡಿದ್ದರೂ ಕೂಡ ಅದನ್ನು ನಾನು ಒಪ್ಪಿಕೊಳ್ಳುತ್ತಿರಲಿಲ್ಲ ಪ್ರಾಣಿಗಳು ನಮ್ಮನ್ನು ಬಿಟ್ಟು ಹೋಗುವಾಗ ನಮ್ಮ ನೋವನ್ನು ಕೂಡ ಅವು ಜೊತೆಗೆ ತೆಗೆದುಕೊಂಡು ಹೋಗುತ್ತವೆಯಂತೆ. ನನ್ನ ನೀಮೋ ಶಿವಣ್ಣನಿಗೆ ಇದ್ದ ನೋವನ್ನು ಶಾಶ್ವತವಾಗಿ ತೆಗೆದುಕೊಂಡು ಹೋಗಿದ್ದಾನೆ ಎಂದು ಗೀತಾ ಶಿವರಾಜ್ಕುಮಾರ್ ತುಂಬಾ ಭಾವುಕರಾಗಿ ತಮ್ಮ ಪತ್ರವನ್ನು ಮುಗಿಸಿದ್ದಾರೆ.