ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಲಿಕಾನ್ ಸಿಟಿಯಲ್ಲಿ ಹೊಸ ವರ್ಷ ಸಂಭ್ರಮಾಚರಣೆಗಾಗಿ ಜನತೆ ಸಜ್ಜಾಗುತ್ತಿದ್ದು, ಈ ಹಿನ್ನೆಲೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಡಿ. 31 ರಂದು ಹೊಸ ವರ್ಷಾಚರಣೆಯಲ್ಲಿ ಭಾಗವಹಿಸುವ ಸಾರ್ವಜನಿಕರ ಅನುಕೂಲಕ್ಕಾಗಿ ಎಂ.ಜಿ.ರಸ್ತೆಯಿಂದ ನಗರದ ವಿವಿಧ ಭಾಗಗಳಿಗೆ ಹೆಚ್ಚಿನ ಸಾರಿಗೆ ಸೌಲಭ್ಯ ಒದಗಿಸುವ ದೃಷ್ಟಿಯಿಂದ ರಾತ್ರಿ 11 ಗಂಟೆಯ ನಂತರ ತಡರಾತ್ರಿ 2 ಗಂಟೆಯವರೆಗೆ ಪ್ರಯಾಣಿಕರ ಸಂಚಾರದ ಒತ್ತಡಕ್ಕನುಗುಣವಾಗಿ ಬಸ್ ಸಂಚಾರದ ವ್ಯವಸ್ಥೆ ಮಾಡಿದೆ.
ಕ್ರ. ಸಂ ಮಾರ್ಗ ಸಂಖ್ಯೆ ಎಲ್ಲಿಂದ ಎಲ್ಲಿಗೆ
1 G-3 ಬ್ರಿಗೇಡ್ ರಸ್ತೆ ಎಲೆಕ್ಟ್ರಾನಿಕ್ಸ್ ಸಿಟಿ
2 G-4 ಜಿಗಣಿ
3 G-2 ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣ ಸರ್ಜಾಪುರ
4 G-6 ಕೆಂಗೇರಿ ಕೆ.ಹೆಚ್.ಬಿ. ಕ್ವಾರ್ಟ್ರ್ಸ್
5 G-7 ಜನಪ್ರಿಯ ಟೌನ್ ಶಿಪ್
6 G-8 ನೆಲಮಂಗಲ
7 G-9 ಯಲಹಂಕ ಉಪನಗರ 5ನೇ ಹಂತ
8 G-10 ಯಲಹಂಕ
9 G-11 ಬಾಗಲೂರು
10 317-G ಹೊಸಕೋಟೆ
11 SBS-13K ಚನ್ನಸಂದ್ರ
12 SBS-1K ಕಾಡುಗೋಡಿ
13 13 ಬನಶಂಕರಿ
ಈ ಮಾರ್ಗದ ಜೊತೆಗೆ ಜನದಟ್ಟಣೆ ಇರುವ ಪ್ರಮುಖ ಬಸ್ ನಿಲ್ದಾಣ,ಜಂಕ್ಷನ್ ಗಳಾದ ಕೆಂಪೇಗೌಡ ಬಸ್ ನಿಲ್ದಾಣ, ಕೃ.ರಾ.ಮಾರುಕಟ್ಟೆ, ಶಿವಾಜಿನಗರ, ಕೋರಮಂಗಲ, ಕಾಡುಗೋಡಿ, ಕೆಂಗೇರಿ, ಸುಮನಹಳ್ಳಿ, ಗೊರಗುಂಟೆಪಾಳ್ಯ, ಯಶವಂತಪುರ, ಯಲಹಂಕ, ಶಾಂತಿನಗರ, ಬನಶಂಕರಿ, ಹೆಬ್ಬಾಳ ಮತ್ತು ಸೆಂಟ್ರಲ್ ಸಿಲ್ಕ್ ಬೋರ್ಡ್ ಗಳಿಂದ ಪ್ರಯಾಣಿಕರ ಬೇಡಿಕೆಗನುಗುಣವಾಗಿ ಸಾರಿಗೆ ಸೌಲಭ್ಯವನ್ನು ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ.