ಹೊಸದಿಗಂತ ಡಿಜಿಟಲ್ ಡೆಸ್ಕ್:
ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಬಿಜೆಪಿ ಪ್ರಿಯಾಂಕ್ ಖರ್ಗೆಯವರ ಮೇಲೆ ಆರೋಪ ಮಾಡುತ್ತಿದೆ. ಅವರ ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ. ತನಿಖೆ ಬಳಿಕ ಸತ್ಯಾಸತ್ಯತೆ ಹೊರಬರಲಿದೆ ಎಂದಿದ್ದಾರೆ. ನಮ್ಮ ಸಿಐಡಿ ಪರಿಣಾಮಕಾರಿಯಾಗಿದೆ. ಬಿಜೆಪಿ ನಾಯಕರು ಅನಗತ್ಯ ಗೊಂದಲ ಸೃಷ್ಟಿಸುವ ಪ್ರಯತ್ನ ಮಾಡಬಾರದು ಎಂದರು.
ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕೆಂಬ ಬಿಜೆಪಿ ಬೇಡಿಕೆಗೆ ಗೃಹ ಸಚಿವರು ಪ್ರತಿಕ್ರಿಯಿಸಿದ್ದು, ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಲು ಯಾವುದೇ ಕಾರಣವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.