ಅರ್ಚಕರಿಗೆ ಪ್ರತಿ ತಿಂಗಳು 18 ಸಾವಿರ ಸಹಾಯಧನ: ಕೇಜ್ರೀವಾಲ್‌ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮುಂಬರಲಿರುವ ದೆಹಲಿ ವಿಧಾನಸಭೆಯಲ್ಲಿ ಆಮ್ ಆದ್ಮಿ ಪಕ್ಷ ಗೆಲುವು ಸಾಧಿಸಿದರೆ ದೇವಸ್ಥಾನಗಳ ಅರ್ಚಕರು, ಗುರುದ್ವಾರಗಳಲ್ಲಿನ ಗ್ರಂಥಿಗಳ ಗೌರವಧನ 18 ಸಾವಿರ ರೂ.ಗೆ ಹೆಚ್ಚಿಸಲಾಗುವುದು ಎಂದು ಆಮ್​ ಆದ್ಮಿ ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.

ಪಕ್ಷವು ಮತ್ತೆ ಅಧಿಕಾರಕ್ಕೆ ಬಂದರೆ, ದೇವಸ್ಥಾನಗಳಲ್ಲಿ ಕೆಲಸ ಮಾಡುವ ಎಲ್ಲಾ ಅರ್ಚಕರು ಮತ್ತು ನಗರದಾದ್ಯಂತ ಗುರುದ್ವಾರಗಳಲ್ಲಿ ಗ್ರಂಥಿಗಳಿಗೆ ತಿಂಗಳಿಗೆ 18,000 ರೂಪಾಯಿಗಳನ್ನು ನೀಡುವುದಾಗಿ ಎಎಪಿ ಭರವಸೆ ನೀಡಿದೆ. ಈ ನಿಟ್ಟಿನಲ್ಲಿ ಪೂಜಾರಿ ಗ್ರಂಥಿ ಸಮ್ಮಾನ್ ಯೋಜನೆಯನ್ನು ಜಾರಿಗೆ ತರಲು ಸರ್ಕಾರ ಮುಂದಾಗಿದೆ.

ಸಿಎಂ ಮಹಿಳಾ ಸಮ್ಮಾನ್ ಯೋಜನೆ ಮತ್ತು ಸಂಜೀವನಿ ಯೋಜನೆ ಮತ್ತು ಅರ್ಚಕರಿಗೆ ಗೌರವಧನ ನೀಡುವ ಯೋಜನೆಯನ್ನು ವಿರೋಧಿಸಬೇಡಿ ಎಂದು ಆಪ್ ರಾಷ್ಟ್ರೀಯ ಸಂಚಾಲಕ ಕೇಜ್ರಿವಾಲ್ ಬಿಜೆಪಿ ನಾಯಕರಿಗೆ ಮನವಿ ಮಾಡಿದ್ದಾರೆ. ಮಹಿಳೆಯರು, ದಲಿತರು ಮತ್ತು ಹಿರಿಯ ನಾಗರಿಕರು ಸೇರಿದಂತೆ ನಿರ್ದಿಷ್ಟ ವರ್ಗದ ಮತದಾರರನ್ನು ಗುರಿಯಾಗಿಸಿಕೊಂಡು ಪಕ್ಷ ಇದುವರೆಗೆ ನಾಲ್ಕು ಕಲ್ಯಾಣ ಯೋಜನೆಗಳನ್ನು ಘೋಷಿಸಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!