ರಾಜ್ಯಪಾಲರ ಅಂಗಳಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್-ಸಿ.ಟಿ.ರವಿ ಜಟಾಪಟಿ: ಪೊಲೀಸರ ವಿರುದ್ಧ ಕ್ರಮಕ್ಕೆ ಒತ್ತಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್;

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸಿ.ಟಿ.ರವಿ ನಡುವಿನ ಜಟಾಪಟಿ ರಾಜ್ಯಪಾಲರ ಅಂಗಳ ತಲುಪಿದೆ. ಇಂದು ಗರ್ವನರ್ ಅವರನ್ನು ಭೇಟಿ ಮಾಡಿದ ಸಿಟಿ ರವಿ, ಅಂದು ಪರಿಷತ್​ನಲ್ಲಿ ಏನೆಲ್ಲಾ ಆಯ್ತು, ತಮ್ಮ ಬಂಧನದ ಬಳಿಕ ನಡೆದ ಬೆಳವಣಿಗೆಗಳ ಬಗ್ಗೆ ಇಂಚಿಂಚು ಮಾಹಿತಿ ನೀಡಿ ಬಂದಿದ್ದಾರೆ .

ರಾಜ್ಯಪಾಲರಿಗೆ 8 ಪುಟಗಳ ದೂರು ನೀಡಿದ್ದು, ತಮ್ಮ ಮೇಲಿನ ಪೊಲೀಸ್ ದೌರ್ಜನ್ಯದ ಕುರಿತು ಡಿಜಿ & ಐಜಿಪಿಯಿಂದ ಸ್ಪಷ್ಟನೆ ಪಡೆದುಕೊಳ್ಳುವಂತೆ ಮನವಿ ಮಾಡಿದ್ದಾರೆ.

ಡಿ.19ರಂದು ಇಡೀ ರಾತ್ರಿ ನಡೆದ ಪೊಲೀಸರ ಅಮಾನವೀಯ ವರ್ತನೆ ಮಾಡಿದ್ದಾರೆ. ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಬೆಳಗಾವಿ ನಗರ ಪೊಲೀಸ್ ಕಮಿಷನರ್​​ ಯಡಾ ಮಾರ್ಟಿನ್​, ಎಸ್‌ಪಿ ಗುಳೇದ್ ಮತ್ತು ಇತರೆ ಪೊಲೀಸರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದು, ತಮಗೆ ಪ್ರಾಣಾಪಾಯ ಇದ್ದು, ಸೂಕ್ತ ಭದ್ರತೆ ಕೊಡಬೇಕು ಎಂದು ದೂರಿನಲ್ಲಿ ಮನವಿ ಮಾಡಿದ್ದಾರೆ. ರಾಷ್ಟ್ರಪತಿ, ಕೇಂದ್ರ ಗೃಹ ಇಲಾಖೆ ಗಮನಕ್ಕೂ ತರುವಂತೆ ಪತ್ರದಲ್ಲಿ ಉಲ್ಲೇಖಿಸಿದ್ದು, ದೂರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧವೂ ಆರೋಪ ಮಾಡಿದ್ದಾರೆ.

ದೂರಿನಲ್ಲಿ ಫೇಕ್ ಎನ್‌ಕೌಂಟರ್ ವಿಚಾರ ಪ್ರಸ್ತಾಪಿಸಿರುವ ಸಿ.ಟಿ.ರವಿ, ಡಿಕೆ ಶಿವಕುಮಾರ್​ ಸೂಚನೆ ಮೇರೆಗೆ ಪೊಲೀಸರು ಸುಪಾರಿ ಕಿಲ್ಲರ್ ರೀತಿ ವರ್ತಿಸಿದರು. ನಿಗೂಢ ಸ್ಥಳಗಳಿಗೆ ಕರೆದೊಯ್ದು ಫೇಕ್ ಎನ್‌ಕೌಂಟರ್ ಮಾಡಲು ಸಂಚು ರೂಪಿಸಿದ್ದರು. ಪೊಲೀಸರು ಸುವರ್ಣಸೌಧದೊಳಗೆ ಪ್ರವೇಶ ಮಾಡಿ ಬಂಧಿಸಿದ್ದು, ಅಕ್ರಮ ನನ್ನ ಹಕ್ಕು ಚ್ಯುತಿ ಆಗಿದೆ ಎಂದಿದ್ದಾರೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರು ಕೊಲೆ ಮಾಡಿವುದಾಗಿ ಧಮ್ಕಿ ಹಾಕಿದ್ದು, ಅವರ ಬಂಟರಿಂದಲು ಕೂಡ ಫೇಕ್ ಎನ್‌ಕೌಂಟರ್ ಸಂಚು ಆರೋಪ ಮಾಡಿದ್ದಾರೆ. ಸದನದ ವ್ಯಾಪ್ತಿಯಲ್ಲಿ ನಡೆದ ಘಟನೆ ಬಗ್ಗೆ ತನಿಖೆ ನಡೆಸುವ ಅಧಿಕಾರ ಸಿಐಡಿಗಿಲ್ಲ. ಘಟನೆ ನಡೆದ ಸ್ಥಳ ಸಿಐಡಿ ವ್ಯಾಪ್ತಿಗೂ ಬರುವುದಿಲ್ಲ. ನನ್ನ ಬಂಧನ ಅಕ್ರಮ, ಕಾನೂನು ವಿರೋಧಿ ಅಂತ ಹೈಕೋರ್ಟ್ ಅಭಿಪ್ರಾಯಪಟ್ಟಿದೆ ಎಂದು ಸುದೀರ್ಘ ದೂರಿನಲ್ಲಿ ಹಲವು ಅಂಶಗಳನ್ನು ಉಲ್ಲೇಖಿಸಿದ್ದಾರೆ.

ಇನ್ನು ಗವರ್ನರ್ ಭೇಟಿ ಬಳಿಕ ಮಾತಾಡಿದ್ದ ಸಿ.ಟಿ.ರವಿ, ನನ್ನ ಕಬ್ಬಿನ ಗದ್ದೆ, ಕ್ರಷರ್​ಗೆ ಕರ್ಕೊಂಡು ಹೋಗಿ ಎನ್​ಕೌಂಟರ್ ಮಾಡಲು ಯತ್ನಿಸಿದ್ದರು. ಒಂದೋ ಹತ್ಯೆ ಮಾಡಬೇಕು, ಇಲ್ಲವೇ ಆತ್ಮಹತ್ಯೆಗೆ ಶರಣಾಗಬೇಕು ಅನ್ನುವಂತೆ ಕಾಟ ಕೊಟ್ಟರು ಅಂತಾ ಆರೋಪಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!