ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ನಡೆದ ಜನಾಂಗೀಯ ಹಿಂಸಾಚಾರಕ್ಕಾಗಿ ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಮಂಗಳವಾರ ರಾಜ್ಯದ ಜನರ ಕ್ಷಮೆಯಾಚಿಸಿದ್ದಾರೆ ಮತ್ತು ಹಿಂದಿನದನ್ನು ಕ್ಷಮಿಸುವಂತೆ ಮತ್ತು ಮರೆಯುವಂತೆ ಮನವಿ ಮಾಡಿದ್ದಾರೆ.
ಇಂಫಾಲ್ ನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಿಂಗ್, ಹಿಂಸಾಚಾರವನ್ನು ನಿಭಾಯಿಸಿದ ಬಗ್ಗೆ ಪ್ರತಿಪಕ್ಷಗಳಿಂದ ಟೀಕೆಗೆ ಗುರಿಯಾಗಿದ್ದು, ಮಣಿಪುರದಲ್ಲಿ ಶಾಂತಿಯನ್ನು ಪುನಃಸ್ಥಾಪಿಸಲಾಗುತ್ತಿದೆ ಎಂದು ಒತ್ತಿ ಹೇಳಿದರು.
ಈ ಇಡೀ ವರ್ಷ ತುಂಬಾ ದುರದೃಷ್ಟಕರ. ಕಳೆದ ಮೇ 3 ರಿಂದ ಇಂದು ಏನಾಗುತ್ತಿದೆಯೋ ಅದಕ್ಕಾಗಿ ನಾನು ರಾಜ್ಯದ ಜನರಲ್ಲಿ ಕ್ಷಮೆಯಾಚಿಸಲು ಬಯಸುತ್ತೇನೆ. ಅನೇಕ ಜನರು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡರು. ಅನೇಕ ಜನರು ತಮ್ಮ ಮನೆಗಳನ್ನು ತೊರೆದರು. ನನಗೆ ವಿಷಾದವಾಗುತ್ತಿದ್ದು, ನಾನು ಕ್ಷಮೆಯಾಚಿಸುತ್ತೇನೆ. ಆದರೆ ಈಗ, ಕಳೆದ ಮೂರ್ನಾಲ್ಕು ತಿಂಗಳುಗಳಿಂದ ಶಾಂತಿಯತ್ತ ಪ್ರಗತಿಯನ್ನ ನೋಡಿದ ನಂತರ, 2025ರಲ್ಲಿ ರಾಜ್ಯದಲ್ಲಿ ಸಾಮಾನ್ಯ ಸ್ಥಿತಿಯನ್ನು ಪುನಃಸ್ಥಾಪಿಸಲಾಗುವುದು ಎಂದು ನಾನು ಭಾವಿಸುತ್ತೇನೆ ಎಂದು ಸಿಂಗ್ ಹೇಳಿದರು.