ಹೊಸ ಭರವಸೆಯೊಂದಿಗೆ ಈ ವರ್ಷವನ್ನು ಬರಮಾಡಿಕೊಳ್ಳೋಣ: ಜನತೆಗೆ ಶುಭಾಶಯ ಕೋರಿದ ಸಿಎಂ ಸಿದ್ದು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಿಎಂ ಸಿದ್ದರಾಮಯ್ಯ ಅವರು ನಾಡಿನ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ್ದಾರೆ.

ಎಕ್ಸ್ ಖಾತೆಯಲ್ಲಿ ಟ್ವಿಟ್ ಮಾಡಿದ ಸಿಎಂ ಸಿದ್ದರಾಮಯ್ಯ. ‘ಪ್ರೀತಿಯ ನಾಡಬಾಂಧವರಿಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು, ಹೊಸ ವರ್ಷವನ್ನು ಹೊಸ ಚಿಂತನೆ, ಹೊಸ ಭರವಸೆ ಹಾಗೂ ಹೊಸ ಉತ್ಸಾಹದೊಂದಿಗೆ ಬರಮಾಡಿಕೊಳ್ಳೋಣ. ಜಾತಿ, ಧರ್ಮಗಳ ದ್ವೇಷ ತೊರೆದು ಎಲ್ಲರೂ ಒಂದಾಗಿ ಪ್ರೀತಿ ಸಹಬಾಳ್ವೆಯ ಹಾದಿಯಲ್ಲಿ ಹೆಜ್ಜೆಹಾಕೋಣ. 2025ರ ನವ ವಸಂತ ತಮ್ಮೆಲ್ಲರ ಬಾಳಲ್ಲಿ ಸುಖ, ಶಾಂತಿ, ಸಮೃದ್ಧಿಯನ್ನು ತರಲಿ ಎಂದು ಹಾರೈಸುತ್ತೇನೆ’ ಎಂದು ಸಿಎಂ ಸಿದ್ದರಾಮಯ್ಯ ಬರೆದಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!