ಶಿವರಾಜ್‌ಕುಮಾರ್‌ ಈಗ ಕ್ಯಾನ್ಸರ್‌ ಫ್ರೀ: ಗುಡ್‌ ನ್ಯೂಸ್‌ ಹಂಚಿಕೊಂಡ ಪತ್ನಿ ಗೀತಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಅಮೆರಿಕದಿಂದ ಶಿವಣ್ಣ ಅವರ ಆರೋಗ್ಯ ಕುರಿತು ಬಿಗ್ ಅಪ್​ಡೇಟ್ಸ್​ ಹೊರಬಿದ್ದಿದೆ. ಫೈನಲಿ ಶಿವರಾಜ್‌ಕುಮಾರ್‌ ಕ್ಯಾನ್ಸರ್‌ ಫ್ರೀ ಆಗಿದ್ದಾರೆ.

ಸರ್ಜರಿ ಕುರಿತು ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾದಲ್ಲಿ ಶಿವಣ್ಣ ದಂಪತಿ ಮಾತನಾಡಿದ್ದಾರೆ. ವಿಡಿಯೋದಲ್ಲಿ ಗೀತಾ ಶಿವರಾಜ್​ ಕುಮಾರ್ ಅವರು ಮಾತನಾಡಿ, ಮೊದಲು ಎಲ್ಲ ಕನ್ನಡಿಗರಿಗೆ ಹೊಸ ವರ್ಷದ ಹಾರ್ದಿಕ ಶುಭಾಶಯ ತಿಳಿಸಿದ್ದಾರೆ. ನೀವೆಲ್ಲ ಮಾಡಿದ ಆಶೀರ್ವಾದದಿಂದ ಎಲ್ಲ ರಿಪೋರ್ಟ್​​ಗಳು ನೆಗೆಟಿವ್ ಬಂದಿವೆ. ಕೊನೆಯಲ್ಲಿ ಪೈಥೋಲಾಜಿ ರಿಪೋರ್ಟ್​ ಬಗ್ಗೆ ಕಾಯುತ್ತಿದ್ದೆವು. ಅದು ಕೂಡ ನೆಗೆಟಿವ್ ಬಂದಿದ್ದು ಶಿವರಾಜ್​ ಕುಮಾರ್ ಅವರು ಕ್ಯಾನ್ಸರ್​ ಫ್ರಿ ಆಗಿದ್ದಾರೆ ಎಂದು ಹೇಳಿದ್ದಾರೆ.

ಆಸ್ಪತ್ರೆಯವರು ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ. ಇದಕ್ಕೆಲ್ಲ ಕಾರಣ ದೊಡ್ಡವರ ಹಾಗೂ ನಿಮ್ಮೆಲ್ಲರ ಆಶೀರ್ವಾದವಾಗಿದೆ. ನಾನು ಇದನ್ನು ನನ್ನ ಜೀವನದಲ್ಲಿ ಯಾವತ್ತೂ ಮರೆಯುವುದಿಲ್ಲ ಅಂತ ಗೀತಾ ಶಿವರಾಜ್​ಕುಮಾರ್ ಅವರು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!