ಹೊಸದಿಗಂತ ಡಿಜಿಟಲ್ ಡೆಸ್ಕ್:
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸ್ನಲ್ಲಿಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಯಾವುದೇ ಸಾಕ್ಷಿಗಳು ಇಲ್ಲ. ಡೆತ್ ನೋಟ್ನಲ್ಲಿ ಸಚಿವರ ಹೆಸರು ಇಲ್ಲ. ಹೀಗಾಗಿ ರಾಜೀನಾಮೆ ಪಡೆಯುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಈ ವೇಳೆ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದರು. ಬಿಜೆಪಿ ಅವರು ದಾಖಲಾತಿ ಇಟ್ಟುಕೊಂಡು ಹೋರಾಟ ಮಾಡಬೇಕು. ಸಚಿನ್ ಡೆತ್ ನೋಟ್ ಬರೆದಿದ್ದಾನೆ. ಅದರಲ್ಲಿ ಪ್ರಿಯಾಂಕ್ ಖರ್ಗೆ ಹೆಸರು ಇಲ್ಲ. ಯಾಕೆ ಅವರು ರಾಜೀನಾಮೆ ಕೊಡಬೇಕು. ಅವರ ಪಾತ್ರ ಏನು ಇಲ್ಲ, ಹಾಗಾದರೆ ಯಾಕೆ ರಾಜೀನಾಮೆ ಕೊಡಬೇಕು ಎಂದು ಪ್ರಶ್ನಿಸಿದ್ದಾರೆ.
ಈಶ್ವರಪ್ಪ ಕೇಸ್ನಲ್ಲಿ ಡೆತ್ ನೋಟ್ನಲ್ಲಿ ಈಶ್ವರಪ್ಪ ಹೆಸರು ಇತ್ತು. ಈ ಕೇಸ್ನಲ್ಲಿ ಡೆತ್ ನೋಟ್ ನಲ್ಲಿ ಪ್ರಿಯಾಂಕ್ ಖರ್ಗೆ ಹೆಸರು ಇದೆಯಾ? ಪ್ರಿಯಾಂಕ್ ಖರ್ಗೆ ಹೆಸರು ಎಲ್ಲೂ ಕೂಡಾ ಇಲ್ಲ. ಪ್ರಿಯಾಂಕ್ ಖರ್ಗೆ ಈಗಾಗಲೇ ಹೇಳಿದ್ದಾರೆ ಯಾವುದೇ ತನಿಖೆಗೆ ಸಿದ್ದರಾಗಿದ್ದಾರೆಂದು.