ಭಾರತೀಯ ಸೇನೆಯ ಭರ್ಜರಿ ಕಾರ್ಯಾಚರಣೆ: ಜೈಶ್-ಎ-ಮೊಹಮ್ಮದ್’ಗೆ ಸೇರಿದ ನಾಲ್ವರು ಉಗ್ರರ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಮ್ಮು ಮತ್ತು ಕಾಶ್ಮೀರದ ತ್ರಾಲ್‌ ನಲ್ಲಿ ನಿಷೇಧಿತ ಸಂಘಟನೆ ಜೈಶ್-ಎ-ಮೊಹಮ್ಮದ್ ನ ನಾಲ್ವರು ಭಯೋತ್ಪಾದಕ ಸಹಚರರನ್ನು ಭಾರತೀಯ ಸೇನೆ ಬಂಧಿಸಿದೆ ಎಂದು ಭದ್ರತಾ ಪಡೆಗಳು ಬುಧವಾರ ತಿಳಿಸಿವೆ.

ಬಂಧನದ ಸಮಯ ಅವರ ಬಳಿಯಿಂದ ದೋಷಾರೋಪಣೆ ವಸ್ತುಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಭದ್ರತಾ ಪಡೆಗಳು ತಿಳಿಸಿವೆ.

ತ್ರಾಲ್‌ ಮತ್ತು ಅವಂತಿಪೋರಾ ಪ್ರದೇಶಗಳಲ್ಲಿ ಜೈಶ್-ಎ-ಮೊಹಮ್ಮದ್’ನ ಸಕ್ರಿಯ ಭಯೋತ್ಪಾದಕರಿಗೆ ಲಾಜಿಸ್ಟಿಕ್ಸ್, ಬೆಂಬಲ ಮತ್ತು ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನ ಸಾಗಿಸುವಲ್ಲಿ ಭಾಗಿಯಾಗಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತ್ರಾಲ್‌ ಪೊಲೀಸ್ ಠಾಣೆಯಲ್ಲಿ ಕಾನೂನಿನ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!