ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಶೀತಲ ಸಮರ ಸದ್ಯಕ್ಕೆ ತಣ್ಣಗಾದ ಲಕ್ಷಣಗಳು ಕಾಣುತ್ತಿವೆ. ಇತ್ತೀಚಿನ ಜಂಟಿ ಅಧಿವೇಶನದ ಭಾಷಣದಲ್ಲಿ ಉಂಟಾದ ಕಹಿ ಘಟನೆಯನ್ನು ಮರೆಯಲು ಸರ್ಕಾರ ಈ ಬಾರಿ ಅತ್ಯಂತ ಎಚ್ಚರಿಕೆಯ ಹೆಜ್ಜೆ ಇಟ್ಟಿದೆ.
ಜನವರಿ 26ರ ಗಣರಾಜ್ಯೋತ್ಸವದ ಭಾಷಣಕ್ಕೆ ರಾಜ್ಯಪಾಲರು ಅಂತಿಮ ಒಪ್ಪಿಗೆ ನೀಡಿದ್ದಾರೆ. ಲೋಕಭವನಕ್ಕೆ ಕಳುಹಿಸಲಾಗಿದ್ದ ಭಾಷಣದ ಪ್ರತಿಯನ್ನು ರಾಜ್ಯಪಾಲರು ಕೂಲಂಕಷವಾಗಿ ಪರಿಶೀಲಿಸಿ, ಗ್ರೀನ್ ಸಿಗ್ನಲ್ ನೀಡಿದ್ದಾರೆ.
ಈ ಬಾರಿಯ ಭಾಷಣದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಯಾವುದೇ ಕಠಿಣ ಟೀಕೆ ಅಥವಾ ವಾಗ್ದಾಳಿಗಳಿಲ್ಲದಂತೆ ಸರ್ಕಾರ ಎಚ್ಚರ ವಹಿಸಿದೆ.
ಕಳೆದ ಜಂಟಿ ಅಧಿವೇಶನದಲ್ಲಿ 11 ಪ್ಯಾರಾಗಳಿಗೆ ಆಕ್ಷೇಪ ವ್ಯಕ್ತಪಡಿಸಿ, ಕೇವಲ ಒಂದು ನಿಮಿಷದಲ್ಲಿ ರಾಜ್ಯಪಾಲರು ಭಾಷಣ ಮುಗಿಸಿದ್ದು ದೊಡ್ಡ ಮಟ್ಟದ ಸಂಘರ್ಷಕ್ಕೆ ಕಾರಣವಾಗಿತ್ತು.




