ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಡ್ನಿಯಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಕೊನೆಯ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿದ ಟೀಂ ಇಂಡಿಯಾ ಮೊದಲ ದಿನದಾಟದಲ್ಲೇ ಕೇವಲ 185 ರನ್ಗಳಿಗೆ ಆಲೌಟ್ ಆಗುವುದರೊಂದಿಗೆ ತನ್ನ ಮೊದಲ ಇನ್ನಿಂಗ್ಸ್ ಮುಗಿಸಿದೆ.
ಈ ಇನ್ನಿಂಗ್ಸ್ನಲ್ಲಿ ಭಾರತ ತಂಡಕ್ಕೆ ಕೇವಲ 72.2 ಓವರ್‌ಗಳಷ್ಟೇ ಬ್ಯಾಟಿಂಗ್ ಮಾಡಲು ಸಾಧ್ಯವಾಯಿತು. ತಂಡದ ಪರ ರಿಷಬ್ ಪಂತ್ ಗರಿಷ್ಠ 40 ರನ್ ಗಳಿಸಿದರೆ, ರವೀಂದ್ರ ಜಡೇಜಾ 26 ರನ್, ನಾಯಕ ಜಸ್ಪ್ರೀತ್ ಬುಮ್ರಾ 22 ರನ್, ಶುಭ್ಮನ್ ಗಿಲ್ 20 ರನ್, ವಿರಾಟ್ ಕೊಹ್ಲಿ 17 ರನ್ ಮತ್ತು ಯಶಸ್ವಿ ಜೈಸ್ವಾಲ್ 10 ರನ್ಗಳ ಕಾಣಿಕೆ ನೀಡಿದರು. ಇವರನ್ನು ಬಿಟ್ಟರೆ ಇತರ ಬ್ಯಾಟ್ಸ್‌ಮನ್‌ಗಳಿಗೆ ಎರಡಂಕಿ ಮುಟ್ಟಲು ಸಾಧ್ಯವಾಗಲಿಲ್ಲ.
ಕೆಎಲ್ ರಾಹುಲ್ ನಾಲ್ಕು ರನ್, ಪ್ರಸಿದ್ಧ್ ಕೃಷ್ಣ ಮೂರು ರನ್ ಮತ್ತು ಮೊಹಮ್ಮದ್ ಸಿರಾಜ್ ಮೂರು ರನ್ ಕಲೆಹಾಕಿದರೆ, ನಿತೀಶ್ ರೆಡ್ಡಿಗೆ ಖಾತೆ ತೆರೆಯಲು ಸಾಧ್ಯವಾಗಲಿಲ್ಲ. ಆಸ್ಟ್ರೇಲಿಯಾ ಪರ ಸ್ಕಾಟ್ ಬೋಲ್ಯಾಂಡ್ ನಾಲ್ಕು ವಿಕೆಟ್ ಪಡೆದರೆ, ಮಿಚೆಲ್ ಸ್ಟಾರ್ಕ್ ಮೂರು ವಿಕೆಟ್ ಪಡೆದರು. ಪ್ಯಾಟ್ ಕಮಿನ್ಸ್ ಎರಡು ವಿಕೆಟ್ ಪಡೆದರೆ, ನಾಥನ್ ಲಿಯಾನ್ ಒಂದು ವಿಕೆಟ್ ಪಡೆದರು.