ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸಚಿವ ಸಂಪುಟ ಸಭೆಯನ್ನು ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಸಲು ಸರ್ಕಾರ ನಿರ್ಧರಿಸಿದೆ. ಫೆಬ್ರವರಿ 13 ರಂದು ಸರ್ಕಾರದ ಸಭೆಯನ್ನು ನಿಗದಿಪಡಿಸಲಾಗಿದೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿರುವ ಮಹದೇಶ್ವರ ಪ್ರತಿಮೆಯ ಸುಂದರ ಪರಿಸರದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ.
ಇದೇ ಪ್ರಥಮ ಬಾರಿಗೆ ಗಡಿ ಜಿಲ್ಲೆಯಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿದೆ. ಬೆಳಗಾವಿ, ಕಲಬುರಗಿ ಬಳಿಕ ಚಾಮರಾಜನಗರ ಜಿಲ್ಲೆಯಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಣೆಯಾಗುವ ಸಾಧ್ಯತೆ ಇದ್ದು, ಇದರಲ್ಲಿ ಗಿರಿಜನರಿಗೆ ವಸತಿ ಕೂಡ ಸೇರಿದೆ.