ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ನಟ ದರ್ಶನ್ ಬೆನ್ನು ನೋವಿನ ಕಾರಣ ಶಸ್ತ್ರಚಿಕಿತ್ಸೆಗೆ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.
ಸಂಕ್ರಾಂತಿ ಹಬ್ಬದಂದು ದರ್ಶನ್ ಗೆ ಆಪರೇಷನ್ ನಿಗದಿಯಾಗಿದ್ದು, ಮೈಸೂರಿನ ಆಸ್ಪತ್ರೆಯಲ್ಲಿ ಆಪರೇಷನ್ ಮಾಡಿಸಿಕೊಳ್ಳಲಿದ್ದಾರೆ.
ಆಪರೇಷನ್ ಆದ ಒಂದೂವರೆ ತಿಂಗಳ ನಂತರ ದರ್ಶನ್ ಫೈಟ್ ಸೀನ್ ನಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಲ್ಲ. ಕೇವಲ ಚಿತ್ರೀಕರಣದಲ್ಲಿ ಮಾತ್ರ ಭಾಗಿಯಾಗಬಹುದು ಎಂದು ದರ್ಶನ್ಗೆ ಚಿಕಿತ್ಸೆ ನೀಡುತ್ತಿರುವ ವೈದ್ಯ ಡಾ.ಅಜಯ್ ಹೆಗ್ಡೆ ಮಾಹಿತಿ ನೀಡಿದ್ದಾರೆ.