ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಮೂರು ಪ್ರತ್ಯೇಕ ಭೀಕರ ಅಪಘಾತದಲ್ಲಿ ಐವರು ದುರ್ಮರಣ ಹೊಂದಿದ್ದಾರೆ.
ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಕಂಬದಹಳ್ಳಿ ಗೇಟ್ ಬಳಿ ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೊಳವನಹಳ್ಳಿಯ ಹರ್ಷಿತ್ (24), ಪ್ರವೀಣ್ (20) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪ ಹೆದ್ದಾರಿಯ ಸುಳಿಮುರ್ಖಿ ತಿರುವಿನಲ್ಲಿ ಲಾರಿ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಬಿಹಾರದ ಮೂಲದವರು ಎಂದು ತಿಳಿದುಬಂದಿದೆ. ಮೂವರು ಗಾಯಗೊಂಡಿದ್ದಾರೆ. ಮೂವರನ್ನು ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಆಜಾದ್ ನಗರದ ಬಳಿ ಬೈಕ್ ಮತ್ತು ಬೊಲೆರೋ ನಡುವೆ ಅಪಘಾತ ಸಂಭವಿಸಿದೆ. ಬೈಕ್ ಸವಾರ ಮೃತಪಟ್ಟಿದ್ದಾನೆ. ಗುರುಪುರ ಗ್ರಾಮದ ಸುಹೇಲ್ 22 ಮೃತ ಬೈಕ್ ಸವಾರ ಎಂದು ಗುರುತಿಸಲಾಗಿದೆ. ಸುಹೇಲ್ ಬೈಕ್ನಲ್ಲಿ ಗುರುಪುರಕ್ಕೆ ತೆರಳುವಾಗ ಅಪಘಾತ ಸಂಭವಿಸಿದೆ.