ಹೊಸದಿಗಂತ ಡಿಜಿಟಲ್ ಡೆಸ್ಕ್:
ದಿನಸಿ ಸಾಮಗ್ರಿಗಳನ್ನು ಖರೀದಿಸಿ ಸಂಸತದಿಂದ ಮನೆಗೆ ಮರಳುತ್ತಿದ್ದ ತಾಯಿ-ಮಗನನ್ನು ಟಾಟಾ ಏಸ್ ರೂಪದಲ್ಲಿ ಬಂದ ಯಮ ಬಲಿಪಡೆದಿದ್ದಾನೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಗುಂಡೇನಹಳ್ಳಿ ಗೇಟ್ ಬಳಿ ಇಂದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಾಯಿ ಶೈಲಜಾ (45) ಹಾಗೂ ಮಗ ಪ್ರಜ್ವಲ್ (26) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರು ಡಿ-ಮಾರ್ಟ್‌ಗೆ ತೆರಳಿ ಮನೆಗೆ ಬೇಕಾದ ದಿನಸಿ ವಸ್ತುಗಳನ್ನು ಖರೀದಿಸಿ ತಮ್ಮ ಬೈಕ್‌ನಲ್ಲಿ ವಾಪಸ್ ಆಗುತ್ತಿದ್ದರು. ಗುಂಡೇನಹಳ್ಳಿ ಗೇಟ್ ತಲುಪುತ್ತಿದ್ದಂತೆ, ಅತೀ ವೇಗವಾಗಿ ಬಂದ ಟಾಟಾ ಏಸ್ ವಾಹನವು ಇವರ ಬೈಕ್‌ಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ತಾಯಿ-ಮಗ ಇಬ್ಬರೂ ರಸ್ತೆಗೆ ಎಸೆಯಲ್ಪಟ್ಟು, ಗಂಭೀರ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಘಟನಾ ಸ್ಥಳಕ್ಕೆ ತ್ಯಾಮಗೊಂಡ್ಲು ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಕಾರಣವಾದ ವಾಹನ ಮತ್ತು ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.



