ಹೊಸದಿಗಂತ ಡಿಜಿಟಲ್ ಡೆಸ್ಕ್:
HMPV ಸೋಂಕಿತ 8 ತಿಂಗಳ ಮಗುವನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುತ್ತಿದೆ.
ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಇಂದು ಮಧ್ಯಾಹ್ನ ಬೆಂಗಳೂರಿನ ಖಾಸಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ. ಸೋಮವಾರ ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಮಗುವಿನ ಪೋಷಕರಿಂದ ಮಾಹಿತಿ ಪಡೆದರು.
ಈಗ ಮಗು ಆರೋಗ್ಯವಾಗಿದೆ. ಸೋಮವಾರ ಡಿಸ್ಚಾರ್ಜ್ ಆಗಬೇಕಿತ್ತು. ಆದ್ರೆ ಇಂದು ಡಾಕ್ಟರ್ ಅಬ್ಸರ್ವೇಟಿವ್ ಅಂತಾ ಒಂದು ದಿನ ಚಿಕಿತ್ಸೆ ನೀಡಿದ್ದರು, ಆದರಿಂದ ಇಂದು ಮಗುವನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುತ್ತಿದೆ.