ಇನ್ನು 5 ದಿನಗಳ ಕಾಲ ಕರ್ನಾಟಕದ ಹಲವೆಡೆ ಗಾಳಿ ಚಳಿಯ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ಬೆಳಗಾವಿ, ಬೀದರ್, ವಿಜಯಪುರ, ಕಲಬುರಗಿ, ಹಾವೇರಿ, ರಾಯಚೂರು ಜಿಲ್ಲೆಗಳಲ್ಲಿ ತಣ್ಣನೆಯ ಗಾಳಿ ಬೀಸಲಿದೆ.
ಚಿಕ್ಕಮಗಳೂರು, ಹಾಸನ, ಮಂಡ್ಯ ದಾವಣಗೆರೆ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಹಾಗೂ ದಕ್ಷಿಣ ಒಳನಾಡಿನ ಗ್ರಾಮಾಂತರ ಪ್ರದೇಶಗಳಲ್ಲಿ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.
ದೇಶಾದ್ಯಂತ ಚಳಿ ತೀವ್ರಗೊಂಡಿದ್ದು, ಕೆಲವೆಡೆ ತಾಪಮಾನ 15 ಡಿಗ್ರಿಗಿಂತ ಕಡಿಮೆಯಾಗಿದೆ. ಮುಂದಿನ 3 ದಿನಗಳಲ್ಲಿ ತಾಪಮಾನ ಮತ್ತಷ್ಟು ಕುಸಿಯುವ ನಿರೀಕ್ಷೆಯಿದೆ. ರಾಜ್ಯಾದ್ಯಂತ ಕನಿಷ್ಠ ತಾಪಮಾನ 2ರಿಂದ 4 ಡಿಗ್ರಿ ಸೆಲ್ಸಿಯಸ್ ಇಳಿಕೆಯಾಗುವ ಸಾಧ್ಯತೆ ಇದ್ದು, ರಾಜ್ಯದಾದ್ಯಂತ ಮಂಜು ಕವಿದ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.