ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಸಂದ ಜಯ: ಗೌರವಧನ ಹೆಚ್ಚಳಕ್ಕೆ ಸಿಎಂ ಸಿದ್ಧರಾಮಯ್ಯ ಸಮ್ಮತಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ನಡೆಸಿದ ಹೋರಾಟ ಕೊನೆಗೂ ಯಶಸ್ವಿಯಾಗಿದೆ. ಆಶಾ ಕಾರ್ಯಕರ್ತೆಯರ ನಿಯೋಗದ ಜತೆ ಮಾತುಕತೆ ನಡೆಸಿದ ಬಳಿಕ ಸಿಎಂ ಸಿದ್ದರಾಮಯ್ಯ ಅವರು ಮಹತ್ವದ ಆದೇಶ ಹೊರಡಿಸಿದ್ದಾರೆ.

ಆಶಾ ಕಾರ್ಯಕರ್ತೆಯರು ತಮಗೆ ಪ್ರತಿ ತಿಂಗಳು 15,000 ರೂಪಾಯಿ ಗೌರವಧನ ನೀಡಬೇಕು ಎಂದು ಡಿಮ್ಯಾಂಡ್​ ಇಟ್ಟಿದ್ದರು. ಈಗ ಸರ್ಕಾರ ಇವರ ಬೇಡಿಕೆಯನ್ನು ಪರಿಗಣಿಸಿದ್ದು, ಕೂಡಲೇ ಗೌರವಧನ 10,000 ಹೆಚ್ಚಿಸಲು ಸಿಎಂ ಸೂಚನೆ ನೀಡಿದ್ದಾರೆ.

ಇಷ್ಟೇ ಅಲ್ಲದೇ ಪ್ರತಿಯೊಂದು ಬೇಡಿಕೆಯನ್ನು ಪರಿಶೀಲನೆ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಕಳೆದ 4 ದಿನಗಳಿಂದ ಆಶಾ ಕಾರ್ಯಕರ್ತೆಯರು ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಧರಣಿ ನಡೆಸುತ್ತಿದ್ದರು. ಆಶಾ ಕಾರ್ಯಕರ್ತೆಯರು ಮತ್ತು ಸರ್ಕಾರದ ಪ್ರತಿನಿಧಿಗಳ ನಡುವೆ ಹಲವು ಸುತ್ತಿನ ಮಾತುಕತೆ ವಿಫಲವಾಗಿತ್ತು. ಸಿಎಂ ಸಿದ್ದರಾಮಯ್ಯ ಅವರೇ ಖುದ್ದು ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸುವ ನಿರ್ಧಾರಕ್ಕೆ ಬಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!