ಹೊಸದಿಗಂತ ಡಿಜಿಟಲ್ ಡೆಸ್ಕ್:
ಐರ್ಲೆಂಡ್ ವಿರುದ್ಧ ಟೀಂ ಇಂಡಿಯ 116 ರನ್ಗಳ ಭರ್ಜರಿ ಜಯಗಳಿಸಿದ್ದು, ಸೀರಿಸ್ ಗೆದ್ದಿದೆ.
ಮಿಯಾ ರೋಡ್ರಿಗಸ್ ಭರ್ಜರಿ ಶತಕ ಹಾಗೂ ಕ್ಯಾಪ್ಟನ್ ಸ್ಮೃತಿ ಮಂಧಾನ, ಹರ್ಲೀನ್ ಡಿಯೋಲ್, ಪ್ರತೀಕಾ ರಾವಲ್ ಫಿಫ್ಟಿ ಆಟದ ನೆರವಿನಿಂದ ಮಹಿಳೆಯರ ಏಕದಿನ ಸರಣಿಯ ಎರಡನೇ ಪಂದ್ಯದಲ್ಲೂ ಐರ್ಲೆಂಡ್ ವಿರುದ್ಧ ಭಾರತ ಭರ್ಜರಿ ಜಯ ಸಾಧಿಸಿದೆ. ಟೀಂ ಇಂಡಿಯಾ ಮೂರು ದಿನದ ಸರಣಿಯನ್ನು ಕೈವಶ ಮಾಡಿಕೊಂಡಿದೆ.
ರಾಜ್ಕೋಟ್ನಲ್ಲಿ ಭಾನುವಾರ ನಡೆದ ಎರಡನೇ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ ಭಾರತ ತಂಡ 116 ರನ್ಗಳ ಭರ್ಜರಿ ಜಯ ಸಾಧಿಸಿದೆ. ಆ ಮೂಲಕ 2-0 ಅಂತರದ ಮುನ್ನಡೆ ಕಾಯ್ದುಕೊಂಡಿದೆ.