ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಾಮರಾಜಪೇಟೆಯ ಓಲ್ಡ್ ಪೆನ್ಷನ್ ಮೊಹಲ್ಲಾದ ವಿನಾಯಕನಗರದಲ್ಲಿ ಹಸುಗಳ ಕೆಚ್ಚಲು ಕೊಯ್ದು ಕ್ರೌರ್ಯ ಮೆರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನನ್ನು ಕಾಟನ್ ಪೇಟೆ ಪೊಲೀಸರು ಬಂಧಿಸಿ, ಸ್ಥಳ ಮಹಜರು ನಡೆಸಿದ್ದಾರೆ.
ಚಾಮರಾಜಪೇಟೆಯ ಓಲ್ಡ್ ಪೆನ್ಷನ್ ಮೊಹಲ್ಲಾದ ವಿನಾಯಕನಗರ ನಿವಾಸಿ ಕರ್ಣ ಎಂಬುವರು ಕಳೆದ ಹಲವು ವರ್ಷಗಳಿಂದ ಇಲ್ಲಿ ಹಸು ಸಾಕುತ್ತಿದ್ದಾರೆ. ಶನಿವಾರ ತಡರಾತ್ರಿ ಯಾರೋ ಕಿಡಿಗೇಡಿಗಳು ಮೂರು ಹಸುಗಳ ಕೆಚ್ಚಲನ್ನು ಕತ್ತರಿಸಿ, ಕಾಲಿಗೆ ಮಚ್ಚಿನಿಂದ ಹಲ್ಲೆ ಮಾಡಿ ವಿಕೃತಿ ಮೆರೆದಿದ್ದರು.
ಹಸುಗಳ ಮಾಲೀಕ ಕರ್ಣ ಕಾಟನ್ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರು ಆಧರಿಸಿ ಪ್ರರಕಣ ದಾಖಲಿಸಿಕೊಂಡ ಪೊಲೀಸರು ಭಾನುವಾರ ರಾತ್ರಿ ಓರ್ವ ಆರೋಪಿಯನ್ನು ಬಂಧಿಸಿ, ವಿಚಾರಣೆ ನಡೆಸಿದ್ದಾರೆ. ಚಿಕ್ಕಪೇಟೆ ಉಪ ವಿಭಾಗದ ಎಸಿಪಿ ರಮೇಶ್ ನೇತೃತ್ವದಲ್ಲಿ 20ಕ್ಕೂ ಹೆಚ್ಚು ಪೊಲೀಸರು ತನಿಖೆ ನಡೆಸಿದ್ದಾರೆ.