ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಬಿಎಂಪಿ ದಕ್ಷಿಣ ವಲಯ ಕಚೇರಿ ಮೇಲೆ ಲೋಕಾಯುಕ್ತ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪಾಲಿಕೆ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.
ಲೋಕಾಯುಕ್ತ ದಾಳಿ ವೇಳೆ ತಮ್ಮ ಬದಲಿಗೆ ಮಗನನ್ನು ಕಚೇರಿಯಲ್ಲಿ ಕೂರಿಸಿದ್ದ ಎಸ್ಡಿಎ ಕವಿತಾ ಹಾಗೂ ಸಹಾಯಕ ಕಂದಾಯ ಅಧಿಕಾರಿ ಸುಜಾತಾ ತಮ್ಮ ಅಧಿಕಾರ ವ್ಯಾಪ್ತಿಯಲ್ಲಿ ಅವ್ಯವಸ್ಥೆ ಇದ್ದರೂ ಕ್ರಮ ತೆಗೆದುಕೊಂಡಿರಲಿಲ್ಲ. ಅಧಿಕಾರ ಸಹ ದುರುಪಯೋಗ ಮಾಡಿಕೊಂಡಿದ್ದಾರೆ. ಈ ಹಿನ್ನೆಲೆ ಇಬ್ಬರನ್ನೂ ಅಮಾನತುಗೊಳಿಸಲಾಗಿದೆ.
ಕೆಂಪೇಗೌಡ ನಗರದ ಸಹಾಯಕ ಕಂದಾಯ ಅಧಿಕಾರಿ ಕಚೇರಿಯಲ್ಲಿ ಈ ಘಟನೆ ನಡೆದಿತ್ತು. ಈಗ ಬಗ್ಗೆ ಲೋಕಾಯುಕ್ತ ದೂರಿನ ಅನ್ವಯ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಎಫ್ಐಆರ್ ದಾಖಲಾಗುತ್ತಿದ್ದಂತೆ ಎಸ್ಡಿಎ ಕವಿತಾ ಹಾಗೂ ಎಆರ್ಓ ಸುಜಾತಾ ಇಬ್ಬರನ್ನು ಬಿಬಿಎಂಪಿ ಅಮಾನತುಗೊಳಿಸಿದೆ.