ಹೊಸದಿಗಂತ ಡಿಜಿಟಲ್ ಡೆಸ್ಕ್:
ಎಲ್ಲಾ ರೀತಿಯ ಪ್ರತ್ಯೇಕ ಸಭೆ, ಊಟ, ಡಿನ್ನರ್ ಮೀಟಿಂಗ್ ಯಾವುದಕ್ಕೂ ಅವಕಾಶ ಇಲ್ಲ. ಎಲ್ಲದಕ್ಕೂ ಬ್ರೇಕ್ ಹಾಕಿ ಎಂದು ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ ತಾಕೀತು ಮಾಡಿದ್ದಾರೆ.
ಖಾಸಗಿ ಹೋಟೆಲ್ ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, ಸಮುದಾಯದ ಸಭೆ, ಸಮುದಾಯದ ನಾಯಕರ ಸಭೆ ಮಾಡಬೇಕಾದ ಯಾವುದೇ ಪರಿಸ್ಥಿತಿ ಬಂದರೂ ಹೈಕಮಾಂಡ್ ಅನುಮತಿ ಪಡೆದು ಮಾಡಬೇಕು. ಬಹಿರಂಗವಾಗಿ ಮಾತನಾಡುವ ಎಲ್ಲಾ ಚಟುವಟಿಕೆಗಳನ್ನು ನಿಲ್ಲಿಸಬೇಕು ಎಂದು ಸೂಚಿಸಿದ್ದಾರೆ.