ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದಲ್ಲಿ ನೆಲಬಾಂಬ್ ಸ್ಫೋಟಗೊಂಡು ಕನಿಷ್ಠ ಆರು ಯೋಧರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನೌಶೇರಾ ಸೆಕ್ಟರ್‌ನ ಖಂಬಾ ಕೋಟೆ ಬಳಿ 10:45 ರ ಸುಮಾರಿಗೆ ಸೈನಿಕರೊಬ್ಬರು ಆಕಸ್ಮಿಕವಾಗಿ ನೆಲಬಾಂಬ್ ಮೇಲೆ ಹೆಜ್ಜೆ ಇಟ್ಟಿದ್ದಾರೆ. ಇದರಿಂದಾಗಿ ಸ್ಫೋಟ ಸಂಭವಿಸಿದೆ. ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿದೆ. ಅವರ ಸ್ಥಿತಿ ಸ್ಥಿರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉಗ್ರರು ಪ್ರವೇಶಿಸದಂತೆ ಗಡಿ ನಿಯಂತ್ರಣ ರೇಖೆ ಬಳಿಯ ಪ್ರದೇಶಗಳಲ್ಲಿ ಬಾಂಬ್‌ಗಳನ್ನು ಇರಿಸಲಾಗಿತ್ತು. ಇದು ಕೆಲವೊಮ್ಮೆ ಇಂತಹ ಅವಘಡಗಳಿಗೆ ಕಾರಣವಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.