BREAKING NEWS | ಸ್ಯಾಂಡಲ್‌ವುಡ್‌ನ ಹಿರಿಯ ನಟ ಸರಿಗಮ ವಿಜಿ ಇನ್ನಿಲ್ಲ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಯ್‌ ಇಂದು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ನಿಧನರಾಗಿರುವ ವಿಚಾರವನ್ನು ಪುತ್ರ ರೋಹಿತ್‌ ಅಧಿಕೃತವಾಗಿ ತಿಳಿಸಿದ್ದಾರೆ.

ಕಳೆದ ಕೆಲವು ದಿನಗಳಿಂದಲೂ ವಿಜಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೆಲವು ಸಿನಿಮಾ ನಟ-ನಟಿಯರು ವಿಜಿ ಅವರನ್ನು ದಾಖಲಿಸಿದ್ದ ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದ್ದರು.

ನಾಳೆ ಬೆಳಗ್ಗೆ 10 ರಿಂದ 12 ಗಂಟೆಗೆ ಚಾಮರಾಜಪೇಟೆಯ ಟಿ ಆರ್ ಮಿಲ್ ಬಳಿ ಬರುವ ಚೀತಾಗಾರದಲ್ಲಿ ಅಂತ್ಯ ಕ್ರಿಯೆ ನಡೆಯಲಿದೆ.

ನಾಟಕಗಳಲ್ಲಿ ನಟಿಸುತ್ತಿದ್ದ ವಿಜಿ ಅವರ ‘ಸಂಸಾರದಲ್ಲಿ ಸರಿಗಮ’ ನಾಟಕ ಬಹಳ ಹೆಸರು ಕೊಟ್ಟಿತ್ತು. ಇದೇ ಕಾರಣಕ್ಕೆ ಅವರಿಗೆ ಸರಿಗಮ ವಿಜಿ ಹೆಸರು ಬಂದಿತ್ತು. ನಾಟಕದಿಂದ ಸಿನಿಮಾಕ್ಕೆ ಪದಾರ್ಪಣೆ ಮಾಡಿದ ವಿಜಿ ಅವರು ಹಲವಾರು ಸಿನಿಮಾಗಳಲ್ಲಿ ಪೋಷಕ ಪಾತ್ರ, ಹಾಸ್ಯ ಪಾತ್ರ ಕೆಲವೆಡೆ ವಿಲನ್ ಪಾತ್ರಗಳಲ್ಲಿಯೂ ನಟಿಸಿದ್ದಾರೆ. ವಿಜಿ ನಿಧನಕ್ಕೆ ಸ್ಯಾಂಡಲ್‌ವುಡ್‌ ಕಂಬನಿ ಮಿಡಿದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!