Sunday, January 25, 2026
Sunday, January 25, 2026
spot_img

ಅನುಮಾನಾಸ್ಪದ ರೀತಿಯಲ್ಲಿ ಮಹಿಳೆ ಸಾ*ವು: ದುರಂತಕ್ಕೆ ಕಾರಣವಾಯ್ತಾ ಆ ಕಲಹ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕನಕಪುರ ತಾಲೂಕಿನ ಬೆಟ್ಟೆಗೌಡನಪಾಳ್ಯ ಗ್ರಾಮದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದ್ದು, ತೋಟದ ಮನೆಯ ಈಜುಕೊಳದಲ್ಲಿ ಮಹಿಳೆಯೊಬ್ಬರ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ.

ಮೃತ ಮಹಿಳೆಯನ್ನು 29 ವರ್ಷದ ಪ್ರತಿಭಾ ಎಂದು ಗುರುತಿಸಲಾಗಿದೆ. ಇವರು ತಮ್ಮ ಪತಿ ಬಾಬು ಅವರೊಂದಿಗೆ ಗ್ರಾಮದ ಹೊರವಲಯದಲ್ಲಿರುವ ತೋಟದ ಮನೆಯಲ್ಲಿ ವಾಸವಾಗಿದ್ದರು. ಪ್ರತಿಭಾ ಅವರು ಬಾಬು ಅವರ ಎರಡನೇ ಪತ್ನಿಯಾಗಿದ್ದು, ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.

ಮನೆಯಲ್ಲಿ ಆಗಾಗ ಕೌಟುಂಬಿಕ ಕಲಹಗಳು ನಡೆಯುತ್ತಿದ್ದವು ಎನ್ನಲಾಗಿದೆ. ಇದೇ ಜಗಳದ ಹಳವಂಡದಿಂದ ಪತಿ ಬಾಬು ಅವರೇ ಪ್ರತಿಭಾರನ್ನು ಕೊಲೆ ಮಾಡಿದ್ದಾರೆ ಎಂದು ಮೃತರ ಕುಟುಂಬಸ್ಥರು ಗಂಭೀರವಾಗಿ ಆರೋಪಿಸಿದ್ದಾರೆ. ಸ್ವಿಮ್ಮಿಂಗ್ ಪೂಲ್‌ನಲ್ಲಿ ಶವ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ವಿಷಯ ತಿಳಿದ ತಕ್ಷಣ ಕೋಡಿಹಳ್ಳಿ ಪೊಲೀಸರು ಸ್ಥಳಕ್ಕೆ ಧಾವಿಸಿ ಮಹಜರು ನಡೆಸಿದ್ದಾರೆ. ಸದ್ಯಕ್ಕೆ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ವರದಿ ಬಂದ ನಂತರ ಸಾವಿನ ನಿಖರ ಕಾರಣ ತಿಳಿಯಲಿದೆ. ಪ್ರತಿಭಾ ಅವರ ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಪತಿ ಬಾಬು ಅವರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

Must Read