ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಅಧಿಕಾರ ಹಂಚಿಕೆ ಮತ್ತು ಕೆಪಿಸಿಸಿ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಹೇಳಿಕೆಗಳು ಮತ್ತು ಪ್ರತಿ ಹೇಳಿಕೆಗಳು ಹೊರಹೊಮ್ಮುತ್ತಲೇ ಇವೆ.
ಇದಕ್ಕೆ ಪ್ರತಿಯಾಗಿ ಅಧ್ಯಕ್ಷ ಸಿದ್ದರಾಮಯ್ಯ ಬಹಿರಂಗ ಹೇಳಿಕೆ ನೀಡಿದ್ದು, ಸಚಿವರ ಬದಲಾವಣೆಗೆ ಒಲವು ತೋರಿದ್ದಾರೆ ಎನ್ನಲಾಗಿದೆ.
ಮೂಲಗಳ ಪ್ರಕಾರ ಮುಂದಿನ ಬಜೆಟ್ ಅಧಿವೇಶನಕ್ಕೂ ಮುನ್ನ ಸಚಿವ ಸಂಪುಟ ಪುನಾರಚನೆ ಮಾಡಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಸಚಿವ ಸ್ಥಾನ ಕಳೆದುಕೊಂಡಿರುವ ನಾಗೇಂದ್ರ ಅವರನ್ನು ವಾಪಸ್ ಕರೆತರಲು ಸಿದ್ದರಾಮಯ್ಯ ಬಯಸಿದ್ದಾರೆ.
ಇದರೊಂದಿಗೆ, ಬಹಿರಂಗ ಹೇಳಿಕೆ ನೀಡುತ್ತಿರುವ ಸಚಿವರಿಗೂ ಬದಲಾವಣೆ ತೂಗುಗತ್ತಿ ಕಾದಿದೆಯಾ ಎಂಬ ಅನುಮಾನ ಮೂಡಿದೆ.