ಹೊಸದಿಗಂತ ಡಿಜಿಟಲ್ ಡೆಸ್ಕ್:
ನಗರದ ಜಿ ಸ್ಕೇರ್ ಬಡಾವಣೆಯ ಮಾಡೆಲ್ ಹೌಸ್‌ಗೆ ಬೆಂಕಿ ಹಚ್ಚಿದ ಪ್ರಕರಣವು ಈಗ ಹೊಸ ತಿರುವು ಪಡೆದುಕೊಂಡಿದೆ. ಈ ತನಿಖೆಯ ಬಗ್ಗೆ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಪೊಲೀಸರ ವಿರುದ್ಧ ಗಂಭೀರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೊಲೀಸರ ತನಿಖಾ ವೈಖರಿಯನ್ನು ಕಟುವಾಗಿ ಟೀಕಿಸಿದರು. “ನಾನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ ವಿಡಿಯೋವನ್ನೇ ಆಧಾರವಾಗಿಟ್ಟುಕೊಂಡು ಪೊಲೀಸರು ಎಂಟು ಜನರನ್ನು ಬಂಧಿಸಿದ್ದಾರೆ, ಅದರಲ್ಲಿ ಇಬ್ಬರು ಅಪ್ರಾಪ್ತರೂ ಇದ್ದಾರೆ. ಆದರೆ, ತನಿಖೆಯಲ್ಲಿ ಸತ್ಯವನ್ನು ಮರೆಮಾಚಲಾಗುತ್ತಿದೆ,” ಎಂದು ಅವರು ಆರೋಪಿಸಿದ್ದಾರೆ.
ಬಂಧಿತರನ್ನು ಸೈಟ್ ಇಂಜಿನಿಯರ್‌ಗಳಾದ ರಿಜ್ವಾನ್ ಮತ್ತು ಇಮ್ರಾನ್ ಅವರ ಮೂಲಕವೇ ವಿಡಿಯೋ ಮಾಡಿಸಿದವರು ಎಂದು ಬಿಂಬಿಸಲಾಗುತ್ತಿದೆ.
ಪೊಲೀಸರು ಹೇಳುತ್ತಿರುವ ಈ ಹೇಳಿಕೆಯು ಸತ್ಯಕ್ಕೆ ದೂರವಾಗಿದೆ. ನೈಜತೆಯನ್ನು ಮರೆಮಾಚಿ ಬೇರೆಯದೇ ಕಥೆಯನ್ನು ಸೃಷ್ಟಿಸಲಾಗುತ್ತಿದೆ ಎಂದು ಅವರು ದೂರಿದ್ದಾರೆ.



