ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಚಳಿಯ ವಾತಾವರಣ ಇದೆ. ಇದರ ನಡುವೆಯೂ ಕೆಲವೆಡೆ ಕಳೆದ ಎರಡು ದಿನಗಳಿಂದ ಹಗುರ ಮಳೆಯಾಗಿದೆ. ಇಂದು ಸಹ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮೈಸೂರು, ಮಂಡ್ಯ, ಕೊಡಗು, ಹಾಸನ ಮತ್ತು ತುಮಕೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಕರ್ನಾಟಕ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.