ಹೊಸದಿಗಂತ ಡಿಜಿಟಲ್ ಡೆಸ್ಕ್:
ನಮ್ಮ ಮೆಟ್ರೋ ತನ್ನ ಪ್ರಯಾಣಿಕರಿಗೆ ಮುಖ್ಯವಾದ ವಿಚಾರವನ್ನು ಹಂಚಿಕೊಂಡಿದೆ. ಜನವರಿ 19 ಅಂದರೆ ನಾಳೆ ನೇರಳೆ ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಆಗಲಿದೆ ಎಂದು ತಿಳಿಸಿದೆ.
ಕೆಂಪೇಗೌಡ ಮೆಜೆಸ್ಟಿಕ್ ಮತ್ತು ಇಂದಿರಾನಗರ ನಡುವಿನ ರೈಲು ಸಂಚಾರದಲ್ಲಿ ಬದಲಾವಣೆ ಆಗಲಿದೆ. ಜನವರಿ 19ರ ಬೆಳಗ್ಗೆ 7 ಗಂಟೆಯಿಂದ 10 ಗಂಟೆಯವರೆಗೆ ರೈಲು ಸೇವೆ ಲಭ್ಯವಿರುವುದಿಲ್ಲ. ನೇರಳೆ ಮಾರ್ಗದ ಇತರ ವಿಭಾಗಗಳಲ್ಲಿನ ಮೆಟ್ರೋ ಸೇವೆ ಎಂದಿನಂತೆ ಇರಲಿದೆ.
ಬಿಎಂಆರ್ಸಿಎಲ್ ಮಾಹಿತಿ ಪ್ರಕಾರ, ಹಳಿ ನಿರ್ವಹಣಾ ಕಾಮಗಾರಿ ಇದೆ. ಹೀಗಾಗಿ ಸಂಚಾರದಲ್ಲಿ ವ್ಯತ್ಯಯ ಆಗಲಿದೆ. ಪ್ರಯಾಣಿಕರು ನಾಳೆ ಒಂದು ದಿನ ಸಹಕರಿಸಬೇಕು ಎಂದು ಕೋರಿಕೊಂಡಿದೆ. ನಮ್ಮ ಮೆಟ್ರೋ ತನ್ನ ಪ್ರಯಾಣಿಕರ ಅನುಕೂಲಕ್ಕಾಗಿ ಪ್ರತಿ ಸೋಮವಾರ 4.15ರಿಂದ ರೈಲುಗಳ ಓಡಾಟ ಆರಂಭಿಸುತ್ತಿದೆ. ದೂರದ ಊರುಗಳಿಂದ ಬೆಂಗಳೂರಿಗೆ ಬರುವ ಪ್ರಯಾಣಿಕರಿಗೆ ಇದು ತುಂಬಾನೇ ಅನುಕೂಲ ಆಗಲಿದೆ.