ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಯಾವುದೇ ಕಾರಣಕ್ಕೂ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ಅವಶ್ಯಕತೆ ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಸ್ಪಷ್ಟಪಡಿಸಿದರು.
ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಅಗ್ರಹ ವಿಚಾರವಾಗಿ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಅವಶ್ಯಕತೆ ಇಲ್ಲ. ಮುಡಾದಲ್ಲಿ ರಾಜಕೀಯ ಮಾತನಾಡುವ ಅವಶ್ಯಕತೆ ಇಲ್ಲ. ಯಾವ ಕಾರಣಕ್ಕೂ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಲ್ಲ. ಸಿದ್ದರಾಮಯ್ಯ ರಾಜೀನಾಮೆ ಯ ಬಗ್ಗೆ ಮಾತನಾಡುವ ಅವಶ್ಯಕತೆ ಇಲ್ಲಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.