ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಬೆಳಗಾಳಿಯಲ್ಲೇ ವಾಸ್ತವ್ಯ ಹೂಡಿದ್ದರೂ ಸಚಿವ ಸತೀಶ್ ಜಾರಕಿಹೊಳಿಯವರು ಭೇಟಿ ಮಾಡದಿರುವುದು ಹಲವರ ಹುಬ್ಬೇರುವಂತೆ ಮಾಡಿದೆ.
ಕಾಮಗಾರಿಗಳ ಉದ್ಘಾಟನೆ ನೆಪ ಹೇಳಿಕೊಂಡು ಸತೀಶ್ ಅವರು ಡಿಕೆ.ಶಿವಕುಮಾರ್ ಅವರ ಭೇಟಿಯನ್ನು ನಿಯಂತ್ರಿಸುತ್ತಿದ್ದು, ಈ ಮೂಲಕ ಮುನಿಸು ಹೊರಹಾಕುತ್ತಿದ್ದಾರೆಂಬ ಮಾತುಗಳು ಕೇಳಿ ಬರುತ್ತಿವೆ.
ಈ ನಡುವೆ ಸತೀಶ್ ಜಾರಕಿಹೊಳಿ ಆಪ್ತ ವಲಯದಲ್ಲಿ ಕಾಣಿಸಿಕೊಂಡ ಶಾಸಕರು ದುಬೈ ಪ್ರವಾಸಕ್ಕೆ ಯೋಜನೆ ರೂಪಿಸಿದ್ದು, 4-5 ದಿನಗಳ ಕಾಲ ವಿದೇಶಕ್ಕೆ ಹಾರಲು ಸಜ್ಜಾಗಿದ್ದಾರೆ.
ಈ ಬಗ್ಗೆ ಮಾಹಿತಿ ತಿಳಿದ ಡಿಕೆ ಶಿವಕುಮಾರ್ ಅವರು, ಭಾನುವಾರ ಸತೀಶ್ ಆಪ್ತ ಆಸೀಫ್ ಸೇಠ್ ನಿವಾಸಕ್ಕೆ ಭೇಟಿ ಕೊಟ್ಟಿದ್ದು, ಯಾರೆಲ್ಲಾ ಪ್ರವಾಸಕ್ಕೆ ಹೋಗುತ್ತಿದ್ದಾರೆಂಬುದರ ಕುರಿತು ಪ್ರಶ್ನೆ ಮಾಡಿದ್ದಾರೆಂದು ವರದಿಗಳು ತಿಳಿಸಿವೆ.