ಹೊಸದಿಗಂತ ಡಿಜಿಟಲ್ ಡೆಸ್ಕ್:
ನೆಲಮಂಗಲದ ರಾಷ್ಟ್ರೀಯ ಹೆದ್ದಾರಿ 48ರ ಗುಂಡೇನಹಳ್ಳಿ ಬಳಿ ಬೆಳಗ್ಗೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಆದರೆ ಕಾರು ಲಾರಿಯ ಕೆಳಗೆ ಸಿಲುಕಿ ನಜ್ಜುಗುಜ್ಜಾದರೂ, ಚಾಲಕ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ.
ಸ್ವಿಫ್ಟ್ ಕಾರು, ಟ್ರಕ್ ಮತ್ತು ಪ್ರವಾಸಿ ಬಸ್ ನಡುವೆ ಅಪಘಾತ ಸಂಭವಿಸಿದೆ. ಮೊದಲು ಚಲಿಸುತ್ತಿದ್ದ ಲಾರಿಗೆ ಕಾರು ಡಿಕ್ಕಿಯೊಡೆದಿದೆ, ಕಾರಿಗೆ ಹಿಂಬದಿಯಿಂದ ಟೂರಿಸ್ಟ್ ಬಸ್ ಡಿಕ್ಕಿ ಹೊಡೆದಿದೆ. ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ರಸ್ತೆ ಕಾಮಗಾರಿ ಸ್ಥಗಿತಗೊಳಿಸಿರುವುದು ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.
ತುಮಕೂರು ಜಿಲ್ಲಾ ಸೇಲ್ಸ್ ಟ್ಯಾಕ್ಸ್ ಕಚೇರಿಯ ವಾಹನ ಚಾಲಕನೊಬ್ಬ ಭೀಕರ ಅಪಘಾತದಿಂದ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾನೆ. ಸಣ್ಣಪುಟ್ಟ ಗಾಯಗಳಾಗಿದ್ದು, ಬಚಾವ್ ಆಗಿದ್ದಾರೆ. ನೆಲಮಂಗಲ ಬಸ್ ನಿಲ್ದಾಣ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.