Sunday, January 25, 2026
Sunday, January 25, 2026
spot_img

IMDಯಿಂದ ಎಚ್ಚರಿಕೆ: ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತೆ ಅಂತ! ಹಾಗಿದ್ರೆ ನಮ್ಮ ರಾಜ್ಯದ ಪರಿಸ್ಥಿತಿ ಏನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡಿನ ಹಲವಾರು ಭಾಗಗಳಲ್ಲಿ ಭಾನುವಾರ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಕೇಂದ್ರ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಚೆನ್ನೈ ಪ್ರಾದೇಶಿಕ ಹವಾಮಾನ ಕೇಂದ್ರದ ವರದಿ ಪ್ರಕಾರ, ರಾಜಧಾನಿ ಚೆನ್ನೈ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಗುಡುಗು–ಮಿಂಚಿನೊಂದಿಗೆ ಮಧ್ಯಮ ಮಳೆಯಾಗುವ ನಿರೀಕ್ಷೆ ಇದೆ.

ಚೆಂಗಲ್ಪಟ್ಟು, ತಿರುವಣ್ಣಾಮಲೈ, ಸೇಲಂ, ನಾಮಕ್ಕಲ್, ಕಲ್ಲಕುರಿಚಿ, ವಿಲ್ಲುಪುರಂ, ಕಡಲೂರು, ತಂಜಾವೂರು, ರಾಮನಾಥಪುರಂ ಜಿಲ್ಲೆಗಳು ಮತ್ತು ಪುದುಚೇರಿಯ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 24 ಗಂಟೆಗಳ ಕಾಲ ರಾಜ್ಯದ ಹಲವೆಡೆ ಆಕಾಶ ಮೋಡ ಕವಿದ ಸ್ಥಿತಿಯಲ್ಲಿದ್ದು, ಅಲ್ಲಲ್ಲಿ ಗುಡುಗು ಸಹಿತ ಮಳೆ ಸುರಿಯಲಿದೆ.

ಇನ್ನೊಂದೆಡೆ, ಕರ್ನಾಟಕದಲ್ಲಿ ಮುಂದಿನ ಕೆಲ ದಿನಗಳು ಒಣಹವೆ ಮುಂದುವರಿಯುವ ಸಾಧ್ಯತೆ ಇದ್ದು, ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮಾತ್ರ ಅಲ್ಲಲ್ಲಿ ತುಂತುರು ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

Must Read