ಫಲಿಸಲಿಲ್ಲ ನಟ ದರ್ಶನ್‌ ಮನವಿ, ಗನ್‌ ಸರಂಡರ್‌ ಮಾಡುವಂತೆ ಪೊಲೀಸರಿಂದ ನೋಟಿಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ ಬಳಿಯಿರುವ ಗನ್ ಲೈಸೆನ್ಸ್ ತಾತ್ಕಾಲಿಕವಾಗಿ ಅಮಾನತ್ತಿನಲ್ಲಿಡಲು ಪೊಲೀಸರು ತಯಾರಿ ಮಾಡಿಕೊಂಡಿದ್ದಾರೆ. ಅದರಂತೆ ಗನ್ ಸರೆಂಡರ್ ಮಾಡುವಂತೆ ಆರ್‍ಆರ್ ನಗರ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

ಮೂರು ವರ್ಷಕ್ಕಿಂತ ಮೇಲ್ಪಟ್ಟ ಶಿಕ್ಷೆ ವಿಧಿಸಬಹುದಾದ ಕೇಸ್‍ನಲ್ಲಿ ಆರೋಪಿಯಾಗಿರುವ ವ್ಯಕ್ತಿಯ ಬಳಿ ಲೈಸೆನ್ಸ್ ಇರುವ ಗನ್ ಇದ್ದರೆ ಅದನ್ನು ಕೂಡಲೇ ವಶಕ್ಕೆ ಪಡೆಯಲಾಗುತ್ತದೆ. ಅಲ್ಲದೇ ಆ ವ್ಯಕ್ತಿಯ ಲೈಸೆನ್ಸ್ ರದ್ದು ಮಾಡಬಹುದಾಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್‍ನಲ್ಲಿ ಲೈಸೆನ್ಸ್ ಗನ್ ಬಳಕೆ ಮಾಡಿರೊದು ಎಲ್ಲಿಯೂ ಕಂಡುಬರದ ಕಾರಣ ತಾತ್ಕಾಲಿಕವಾಗಿ ಅಂದರೆ ಕೇಸ್ ಮುಗಿಯುವತನಕ ಅಮಾನತ್ತಿನಲ್ಲಿಡಲು ಪೊಲೀಸರು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ.

ನಟ ದರ್ಶನ್ ಗನ್ ಲೈಸೆನ್ಸ್ ರದ್ದು ಮಾಡುವ ಈಗಾಗಲೇ ಪೊಲೀಸರು ನೋಟಿಸ್ ನೀಡಿದ್ದರು. ನೋಟಿಸ್‍ನಲ್ಲಿ, ನೀವು ಕೊಲೆ ಪ್ರಕರಣದ ಆರೋಪಿಯಾಗಿದ್ದೀರಿ. ಜಾಮೀನಿನ ಮೇಲೆ ಹೊರಗಿರುವುದರಿಂದ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಗಳಿವೆ. ಗನ್ ಇರೋದ್ರಿಂದ ಸಾಕ್ಷಿಗಳನ್ನು ಬೆದರಿಸುವ ಬಗ್ಗೆ ಅನುಮಾನ ಇದೆ. ಆದ್ದರಿಂದ ನಿಮ್ಮ ಲೈಸೆನ್ಸ್ ರದ್ದು ಮಾಡಬೇಕಿದೆ. ಈ ಬಗ್ಗೆ ಒಂದು ವಾರದೊಳಗೆ ಉತ್ತರಿಸಬೇಕು. ನೋಟಿಸ್‍ಗೆ ಉತ್ತರ ನೀಡಿದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!