ಆಸ್ಪತ್ರೆಯಿಂದ ಬಾಲಿವುಡ್ ನಟ ಸೈಫ್ ಅಲಿ ಖಾನ್ ಡಿಸ್ಚಾರ್ಜ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರು ಇದೀಗ ಚೇತರಿಸಿಕೊಂಡಿದ್ದಾರೆ. 6 ದಿನಗಳ ಬಳಿಕ ಮುಂಬೈನ ಲೀಲಾವತಿ ಆಸ್ಪತ್ರೆಯಿಂದ ಇಂದು (ಜ.21) ಸೈಫ್ ಡಿಸ್ಚಾರ್ಜ್ ಆಗಿ ಮನೆ ತಲುಪಿದ್ದಾರೆ.

ಜ.16ರಂದು ಸೈಫ್ ಅಲಿ ಖಾನ್ ಚಾಕು ಇರಿದ ಘಟನೆ ಜರುಗಿತ್ತು. ದಾಳಿಕೋರನೊಬ್ಬ ಚಾಕುವಿನಿಂದ ಚುಚ್ಚಿದ ಹಿನ್ನೆಲೆ ಕುತ್ತಿಗೆ, ಕೈ ಸೇರಿ 6 ಕಡೆ ಗಂಭೀರ ಗಾಯಗಳಾಗಿತ್ತು. 2 ಶಸ್ತ್ರಚಿಕಿತ್ಸೆಯ ಬಳಿಕ ಇದೀಗ ಸೈಫ್ ಚೇತರಿಸಿಕೊಂಡಿದ್ದಾರೆ. 6 ದಿನಗಳ ನಂತರ, ಇಂದು (ಜ.21) ಮಧ್ಯಾಹ್ನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ನಟನಿಗೆ ಮನೆಯಲ್ಲಿ ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದಾರೆ.

ಇನ್ನೂ ಸೈಫ್ ಅಲಿ ಖಾನ್ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾದ ಆರೋಪಿಯನ್ನು ಜ.19ರಂದು ಮುಂಬೈ ಕೋರ್ಟ್ 5 ದಿನ ಪೊಲೀಸ್ ಕಸ್ಟಡಿಗೆ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!