ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂಡೋನೇಷ್ಯಾದ ಮಧ್ಯ ಜಾವಾದಲ್ಲಿ ಮಳೆಯಿಂದಾಗಿ ಉಂಟಾದ ಭೀಕರ ಭೂಕುಸಿತದಲ್ಲಿ ಕನಿಷ್ಠ 17 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಘೋಷಿಸಿದ್ದಾರೆ.
ಇಂಡೋನೇಷ್ಯಾದ ಪ್ರಮುಖ ದ್ವೀಪವಾದ ಜಾವಾದ ಗುಡ್ಡಗಾಡು ಹಳ್ಳಿಗಳಲ್ಲಿ ಪ್ರವಾಹದಲ್ಲಿ ಕೊಚ್ಚಿಹೋದ ಅಥವಾ ಟನ್ ಗಟ್ಟಲೆ ಮಣ್ಣು ಮತ್ತು ಬಂಡೆಗಳ ಅಡಿಯಲ್ಲಿ ಹೂತುಹೋದ ಕನಿಷ್ಠ 17 ಜನರ ಶವಗಳನ್ನ ಇಂಡೋನೇಷ್ಯಾದ ರಕ್ಷಣಾ ಸಿಬ್ಬಂದಿ ಹೊರತೆಗೆದಿದ್ದಾರೆ. ಅಧಿಕಾರಿಗಳು ಮಂಗಳವಾರ ವಿಪತ್ತನ್ನು ದೃಢಪಡಿಸಿದ್ದಾರೆ ಮತ್ತು ಎಂಟು ಜನರು ಇನ್ನೂ ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ.