ಚಾಂಪಿಯನ್ಸ್‌ ಟ್ರೋಫಿ । ಪಾಕಿಸ್ತಾನಕ್ಕೆ ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ ಹೋಗಲ್ಲ: ಬಿಸಿಸಿಐ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಾಂಪಿಯನ್ಸ್‌ ಟ್ರೋಫಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ ಅವರನ್ನು ಪಾಕಿಸ್ತಾನಕ್ಕೆ ಕಳುಹಿಸದಿರಲು ಬಿಸಿಸಿಐ ನಿರ್ಧರಿಸಿದೆ.

ನಾಯಕನ ಭೇಟಿ ಮತ್ತು ಫೋಟೋಶೂಟ್‌ಗಾಗಿ ರೋಹಿತ್ ಶರ್ಮಾ ಅವರನ್ನು ಪಾಕಿಸ್ತಾನಕ್ಕೆ ಕಳುಹಿಸದಿರಲು ಬಿಸಿಸಿಐ ದೃಢ ನಿರ್ಧಾರ ತೆಗೆದುಕೊಂಡಿದೆ ಎಂದು ಗೌರವ್‌ ಗುಪ್ತ ತಿಳಿಸಿದ್ದಾರೆ.

ಚಾಂಪಿಯನ್ಸ್ ಟ್ರೋಫಿಗಾಗಿ ಪಾಕಿಸ್ತಾನಕ್ಕೆ ಪ್ರಯಾಣಿಸಲು ಭಾರತ ನಿರಾಕರಿಸಿದ ನಂತರ, ಟೂರ್ನಮೆಂಟ್ ಅನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲಾಗಿದೆ. ರೋಹಿತ್ ಶರ್ಮಾ ಟೂರ್ನಮೆಂಟ್ ಪೂರ್ವ ನಾಯಕರ ಸಭೆಗಾಗಿ ಪಾಕಿಸ್ತಾನಕ್ಕೆ ಪ್ರಯಾಣಿಸುವ ಬಗ್ಗೆ ಕೆಲವು ಪ್ರಶ್ನೆಗಳು ಉದ್ಭವಿಸಿದ್ದವು.

ಎಲ್ಲಾ ತಂಡಗಳ ನಾಯಕರು ಯಾವುದೇ ಐಸಿಸಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ಮೊದಲು ಒಟ್ಟುಗೂಡುತ್ತಾರೆ. ಅವರ ಯೋಜನೆಗಳು ಮತ್ತು ಗುರಿಗಳ ಬಗ್ಗೆ ಮಾತನಾಡುತ್ತಾರೆ. ಆದರೆ, ಸೆಕ್ಯೂರಿಟಿ ದೃಷ್ಟಿಯಿಂದ ಟೀಂ ಇಂಡಿಯಾ ಆಟಗಾರರನ್ನು ಪಾಕಿಸ್ತಾನಕ್ಕೆ ಕಳುಹಿಸಲು ಬಿಸಿಸಿಐ ಒಪ್ಪಿಗೆ ಸೂಚಿಸಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!