ಹೊಸದಿಗಂತ ವರದಿ, ಯಲ್ಲಾಪುರ:
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದ ರಸ್ತೆ ಅಪಘಾತ ಸುದ್ದಿ ಕೇಳಿ ಅಘಾತವಾಯಿತು. ಮೃತರ ಕುಟುಂಬಸ್ಥರಿಗೆ ನನ್ನ ತೀವ್ರ ಸಂತಾಪವನ್ನು ಸೂಚಿಸುವೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುವೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತಮ್ಮ ಎಕ್ಸ್ ಖಾತೆಯಲ್ಲಿ ಫೊಸ್ಟ್ ಮಾಡಿದ್ದಾರೆ.