ಹೊಸದಿಗಂತ ವರದಿ, ಮಂಗಳೂರು:
ಮಂಗಳೂರು ಮಸಾಜ್ ಸೆಂಟರ್ ಮೇಲೆ ರಾಮಸೇನೆ ದಾಳಿ ಕುರಿತು ಗೃಹ ಸಚಿವ ಜಿ ಪರಮೇಶ್ವರ್ ಅವರು ಪ್ರತಿಕ್ರಿಯಿಸಿದ್ದು, ದಾಳಿ ಮಾಡಿದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
ದಾಳಿ ಮಾಡಿದ್ದವರನ್ನು ತಕ್ಷಣ ಬಂಧಿಸಲು ನಾನು ಸೂಚಿಸಿದ್ದೇನೆ. ಯಾವ ಉದ್ದೇಶಕ್ಕೆ ದಾಳಿಯಾಗಿದೆ ಗೊತ್ತಿಲ್ಲ. ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲು ಸೂಚನೆ ಕೊಟ್ಟಿದ್ದೇನೆ. ಇಂತಹ ಕೃತ್ಯಗಳು ನಡೆಯಬಾರದು. ಯಾರಿಗೂ ವ್ಯಾಪಾರ ಮಾಡಿಕೊಳ್ಳುವುದಕ್ಕೆ ಅಡ್ಡಿಪಡಿಸಬಾರದು. ಯಾರು ಕೂಡ ಕಾನೂನು ಕೈಗೆತ್ತಿಕೊಳ್ಳಬಾರದು ಎಂದು ಹೇಳಿದ್ದಾರೆ.
ಅನೈತಿಕ ಚಟುವಟಿಕೆ ನಡೆಸುವ ಪಾರ್ಲರ್ಗಳಿದ್ದರೆ ದೂರು ಕೊಡಿ. ದೂರು ಕೊಟ್ಟರೆ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ. ಕಾರ್ಪೊರೇಷನ್ನವರು ಟ್ರೇಡ್ ಲೈಸೆನ್ಸ್ ಕೊಟ್ಟಿರುತ್ತಾರೆ. ಯಾವ ಕಂಡೀಷನ್ ಹಾಕಿ ಕೊಟ್ಟಿರ್ತಾರೆ ಅದನ್ನು ಪಾಲಿಸದಿದ್ದರೆ, ನಿಯಮಾವಳಿಗಳನ್ನು ಮೀರಿ ಮಾಡಿದರೆ ಕ್ರಮ ತೆಗೆದುಕೊಳ್ಳಲಾಗುತ್ತೆ ಎಂದಿದ್ದಾರೆ.