ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಪ್ರಶಸ್ತಿಯನ್ನು ಸ್ಯಾಂಡಲ್‌ವುಡ್ ಬಾದ್ ಷಾ ಕಿಚ್ಚ ಸುದೀಪ್ ಅವರುಸ್ವೀಕರಿಸಲು ನಿರಾಕರಿಸಿದ್ದಾರೆ.
ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಸುದೀಪ್, ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಕ್ಷಮೆ ಕೋರಿದ್ದಾರೆ.
2019ನೇ ಸಾಲಿನ ಚಲನಚಿತ್ರ ಪ್ರಶಸ್ತಿಯನ್ನು ನಿನ್ನೆಯಷ್ಟೇ ರಾಜ್ಯ ಸರ್ಕಾರ ಘೋಷಣೆ ಮಾಡಿತ್ತು. ‘ಪೈಲ್ವಾನ್’ ಚಿತ್ರದ ಅಭಿನಯಕ್ಕಾಗಿ ಅತ್ಯುತ್ತಮ ನಟ ಪ್ರಶಸ್ತಿಗೆ ಕಿಚ್ಚ ಸುದೀಪ್ ಅವರನ್ನ ಆಯ್ಕೆ ಮಾಡಲಾಗಿತ್ತು.
ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಈ ಪ್ರಶಸ್ತಿಯನ್ನು ಸ್ವೀಕರಿಸಲು ಕಿಚ್ಚ ಸುದೀಪ್ ಅವರು ನಿರಾಕರಿಸಿದ್ದಾರೆ. ನನ್ನನ್ನು ಆಯ್ಕೆ ಮಾಡಿದ ತೀರ್ಪುಗಾರರಿಗೆ ಧನ್ಯವಾದಗಳು. ನಾನು ಪ್ರಶಸ್ತಿಗಳನ್ನು ಪಡೆಯೋದು ಬಿಟ್ಟು ತುಂಬಾ ವರ್ಷಗಳಾಗಿದೆ. ನನಗಿಂತ ಉತ್ತಮ ಕಲಾವಿದರು ತುಂಬಾ ಜನ ಇದ್ದಾರೆ. ಅವರಿಗೆ ಈ ಪ್ರಶಸ್ತಿ ಸಿಕ್ಕರೆ ಅದೇ ನನಗೆ ತುಂಬಾ ಖುಷಿಯ ವಿಚಾರ. ಈ ಪ್ರಶಸ್ತಿಯನ್ನು ವಿನಮ್ರವಾಗಿ ತಿರಸ್ಕಾರ ಮಾಡಿದ್ದೇನೆಂದು ಸುದೀಪ್ ತಿಳಿಸಿದ್ದಾರೆ.