ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಜೆಡಿಎಸ್ ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರುವುದಿಲ್ಲ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನಿನ ಪ್ರಕಾರ ಪ್ರಜ್ವಲ್ ರೇವಣ್ಣ ಅವರ ಬಂಧನವಾಗಿದ್ದು, ಸರ್ಕಾರ ಅದರಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ. ಇದೊಂದೇ ಪ್ರಕರಣವಲ್ಲ. ಯಾವುದೇ ಪ್ರಕರಣದಲ್ಲಿಯೂ ಸರ್ಕಾರ ಮಧ್ಯಪ್ರವೇಶ ಮಾಡುವುದಿಲ್ಲ. ಅಧಿಕಾರಿಗಳಿಗೆ ಸರ್ಕಾರ ಬಹುಮಾನ ಕೊಟ್ಟಿಲ್ಲ. ಅದೆಲ್ಲಾ ಸುಳ್ಳು ಎಂದರು.
ನಮಗೂ ಸಮಯ ಬರುತ್ತದೆ ಎಂಬ ಹೆಚ್. ಡಿ.ದೇವೇಗೌಡರ ಮಾತಿನ ಅರ್ಥ ನಮಗೆ ಗೊತ್ತಿಲ್ಲ. 17 ಸ್ಥಾನ ಪಡೆದಿರುವವರು ಅಧಿಕಾರಕ್ಕೆ ಹೇಗೆ ಬರುತ್ತಾರೆ? ಜೆಡಿಎಸ್ ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರುವುದಿಲ್ಲ. ಕಾಂಗ್ರೆಸ್ 140 ಸ್ಥಾನ ಗಳಿಸಿದೆ. 2028ಕ್ಕೂ ನಾವೇ ಅಧಿಕಾರಕ್ಕೆ ಬರುವುದು ಎನ್ನುವ ಭರವಸೆ ನಮಗಿದೆ. ಜಿಡಿಎಸ್ ಮತ್ತು ಬಿಜೆಪಿಯವರು ಮೈತ್ರಿ ಮಾಡಿಕೊಂಡರು ಅಧಿಕಾರಕ್ಕೆ ಬರುವುದಿಲ್ಲ ಎಂಬುದಾಗಿ ಭವಿಷ್ಯ ನುಡಿದಿದ್ದಾರೆ.



