ಹೊಸದಿಗಂತ ಡಿಜಿಟಲ್ ಡೆಸ್ಕ್:
144 ವರ್ಷಗಳಿಗೊಮ್ಮೆ ನಡೆಯುವ ಪ್ರಯಾಗರಾಜ್‌ನ ಮಾಹಾಕುಂಭ ಮೇಳದ ತ್ರಿವೇಣಿ ಸಂಗಮದಲ್ಲಿ ಆರ್‌ಸಿಬಿ ಜೆರ್ಸಿಗೆ ಪುಣ್ಯಸ್ನಾನ ಮಾಡಿಸಿದ್ದಾರೆ. ಈ ಮೂಲಕ ಆರ್‌ಸಿಬಿ ತಂಡ ಈ ಬಾರಿ ಗೆಲ್ಲಲೇಬೇಕು ಎಂದು ಬಯಸಿದ್ದಾರೆ . ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
ನಮ್ಮ ದೇಶದಲ್ಲಿ ಕ್ರಿಕೆಟ್ ಅಭಿಮಾನಿಗಳಿಗೇನೂ ಕಡಿಮೆಯಿಲ್ಲ. ಅದರಲ್ಲಿಯೂ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪ್ರಮುಖ ತಂಡಗಳಲ್ಲಿ ಒಂದಾಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಅತ್ಯಂತ ಜನಪ್ರಿಯ ತಂಡಗಳಲ್ಲಿ ಒಂದಾಗಿದೆ. ಆದರೆ, ಈವರೆಗೆ ಆರ್‌ಸಿಬಿ ಪುರುಷರ ತಂಡ ಮಾತ್ರ ಇದುವರೆಗೂ ಒಂದೇ ಒಂದು ಐಪಿಎಲ್ ಪ್ರಶಸ್ತಿ ಗೆದ್ದಿಲ್ಲ.
ಹೀಗಾಗಿ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ 2025ರಲ್ಲಿ ಆರ್‌ಸಿಬಿ ಫ್ಯಾನ್ ಒಬ್ಬರು ತಂಡದ ಜೆರ್ಸಿಯನ್ನು ತ್ರಿವೇಣಿ ಸಂಗಮದಲ್ಲಿ ಮುಳುಗಿಸಿ ಟ್ರೋಫಿ ಗೆಲ್ಲುವಂತೆ ಪ್ರಾರ್ಥಿಸಿದ್ದಾರೆ.
ಈಗ ವೈರಲ್ ಆಗುತ್ತಿರುವ ಈ ವಿಡಿಯೋದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಅಭಿಮಾನಿ ತಮ್ಮ ತಂಡದ ಮೇಲಿನ ಪ್ರೀತಿಯನ್ನು ತೋರಿಸುತ್ತಿದ್ದಾರೆ. ಆರ್‌ಸಿಬಿಯ ಕೆಂಪು ಮತ್ತು ಕಪ್ಪು ಜೆರ್ಸಿಯನ್ನು ತ್ರಿವೇಣಿ ಸಂಗಮದಲ್ಲಿ ಮುಳುಗಿಸಿ ಆಶೀರ್ವಾದ ಪಡೆಯುತ್ತಿದ್ದಾರೆ. ತಂಡದ ಮೇಲಿನ ಅವರ ಉತ್ಸಾಹವನ್ನು ನೋಡಿ ಜನ ಮೆಚ್ಚಿಕೊಂಡಿದ್ದಾರೆ.
ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಯಾವುದೇ ಟ್ರೋಫಿ ಗೆದ್ದಿಲ್ಲದಿದ್ದರೂ, ಅಭಿಮಾನಿಗಳ ಸಂಖ್ಯೆಯಲ್ಲಿ ಮಾತ್ರ ಯಾರಿಗೂ ಕಮ್ಮಿ ಇಲ್ಲ. ಇನ್‌ಸ್ಟಾಗ್ರಾಮ್‌ನಲ್ಲಿ ಆರ್‌ಸಿಬಿಗೆ 15.9 ಮಿಲಿಯನ್ ಫಾಲೋವರ್ಸ್ ಇದ್ದಾರೆ.