ಶಸ್ತ್ರಾಸ್ತ್ರ ತಯಾರಿಕಾ ಕಾರ್ಖಾನೆಯಲ್ಲಿ ಬೃಹತ್‌ ಸ್ಫೋಟ, 8 ಮಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಶಸ್ತ್ರಾಸ್ತ್ರ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, 8 ಮಂದಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಭಂಡಾರದಲ್ಲಿ ನಡೆದಿದೆ.

ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯಲ್ಲಿರುವ ಕಾರ್ಖಾನೆಯಲ್ಲಿ ಬೆಳಗ್ಗೆ 11 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದೆ. ಘಟನಾ ಸ್ಥಳದಲ್ಲಿ ಪಾರುಗಾಣಿಕಾ ಮತ್ತು ವೈದ್ಯಕೀಯ ಕಾರ್ಯಕರ್ತರು ಬದುಕುಳಿದವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಈ ಸ್ಫೋಟದಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.ಮೃತರ ಗುರುತಿನ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ರಕ್ಷಣಾ ಕಾರ್ಯ ಆರಂಭವಾಗಿದ್ದು,  ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!