ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದೆಲ್ಲೆಡೆ 76ನೇ ಗಣರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ಇಂದು ದೆಹಲಿಯ ಕರ್ಥವ್ಯ ಪಥದಲ್ಲಿ ಆಕರ್ಷಕ ಪಥ ಸಂಚಲನ ನಡೆಯಲಿದೆ.
ಗಣರಾಜೋತ್ಸವ ಆಚರಣೆಗೆ ಕೆಂಪುಕೋಟೆ ಸಜ್ಜಾಗಿದ್ದು, ಪರೇಡ್‌ನಲ್ಲಿ ದೇಶದ ಮಿಲಿಟರಿ ಶಕ್ತಿ ಜೊತೆಗೆ ದೇಶದ ಭವ್ಯ ಪರಂಪರೆ, ಸಂಸ್ಕೃತಿಯ ಅನಾವರಣ ಆಗಲಿದೆ.
ಈ ಬಾರಿ ಸುವರ್ಣ ಭಾರತ, ಪರಂಪರೆ ಮತ್ತು ಅಭಿವೃದ್ಧಿ ಥೀಮ್‌ನಲ್ಲಿ ಗಣರಾಜೋತ್ಸವ ಆಚರಣೆ ಮಾಡಲಾಗುತ್ತಿದ್ದು, ಇಂಡೋನೇಷ್ಯಾದ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಸಮ್ಮುಖದಲ್ಲಿ ಪರೇಡ್ ನಡೆಯಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ ಸೇರಿ ಗಣ್ಯರು ಭಾಗಿಯಾಗಲಿದ್ದಾರೆ.
10,000 ಗಣ್ಯರಿಗೆ ಆಹ್ವಾನ ನೀಡಲಾಗಿದೆ. ಜೊತೆಗೆ ಇದೇ ಮೊದಲಬಾರಿಗೆ 5,000 ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಪ್ರದರ್ಶಿಸಲಾಗುತ್ತಿದೆ.