ಹೊಸದಿಗಂತ ಡಿಜಿಟಲ್ ಡೆಸ್ಕ್:
ಯಶಸ್ವಿ ಶಸ್ತ್ರಚಿಕಿತ್ಸೆ ಬಳಿಕ ಇಂದು ಶಿವಣ್ಣ ತಾಯ್ನಾಡಿಗೆ ಬಂದಿಳಿದಿದ್ದಾರೆ. ಮೂತ್ರಕೋಶದ ಕ್ಯಾನ್ಸರ್ ಸಂಬಂಧ ಆಪರೇಷನ್ ಮಾಡಿಸಿಕೊಳ್ಳಲು ನಟ ಶಿವರಾಜಕುಮಾರ್ ಅಮೆರಿಕಕ್ಕೆ ತೆರಳಿದ್ದರು.
ಬಳಿಕ ಆಪರೇಷನ್ಗೆ ಒಳಗಾಗಿದ್ದು, ಇತ್ತೀಚಿಗಷ್ಟೇ ಶಿವಣ್ಣ ತಾಯ್ನಾಡಿಗೆ ಬರುವ ಸಿಹಿ ಸುದ್ದಿಯನ್ನು ವಿಡಿಯೋ ಮೂಲಕ ಹಂಚಿಕೊಂಡಿದ್ದರು. ಇದೀಗ ಸಂಪೂರ್ಣ ಗುಣಮುಖರಾಗಿ ತಾಯ್ನಾಡಿಗೆ ಮರಳಿದ್ದಾರೆ.
ಅಮೆರಿಕದಿಂದ ದುಬೈಗೆ ಬಂದಿಳಿದು, ಅಲ್ಲಿಂದ ಕನೆಕ್ಟೆಡ್ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿದ್ದಾರೆ. ಶಿವಣ್ಣರನ್ನ ಸ್ವಾಗತಿಸಲು 500ಕೆ.ಜಿ ಹೂಗಳನ್ನ ತಯಾರಿ ಮಾಡಿಕೊಂಡಿರುವ ದೊಡ್ಮನೆ ಅಭಿಮಾನಿಗಳು ಕಾಯುತ್ತಿದ್ದಾರೆ.