ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯಲ್ಲಿ ಗಣರಾಜ್ಯೋತ್ಸವದ ಸಂಭ್ರಮವನ್ನು ಗುರುತಿಸುವ ಮೂಲಕ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ವೀರ ಯೋಧರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಆಗಮಿಸಿ ನಮ್ಮ ವೀರಯೋಧರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು.
ಸಮಾರಂಭದ ನೇತೃತ್ವ ವಹಿಸಿದ್ದ ಪ್ರಧಾನಿ ಮೋದಿ ಅವರು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಪುಷ್ಪಾರ್ಚನೆ ಮಾಡಿದರು, ದೇಶವು ತನ್ನ ವೀರರನ್ನು ಸ್ಮರಿಸುತ್ತದೆ ಎಂದು ತಿಳಿಸಿದರು.