ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಗಣರಾಜ್ಯೋತ್ಸವದ ಸಂದರ್ಭದಲ್ಲಿ ಭಾರತೀಯ ವಾಯುಪಡೆಯ (IAF) ಗ್ರೂಪ್ ಕ್ಯಾಪ್ಟನ್,ಗಗನಯಾತ್ರಿ ಶುಭಾಂಶು ಶುಕ್ಲಾ ಅವರಿಗೆ ಪ್ರತಿಷ್ಠಿತ ಅಶೋಕ ಚಕ್ರದಿಂದ ಗೌರವಿಸಲಾಗಿದೆ.
ಗಣರಾಜ್ಯೋತ್ಸವ ಮುನ್ನ ದಿನ ಕೇಂದ್ರ ಸರ್ಕಾರ ಪ್ರಶಸ್ತಿಯನ್ನು ಪ್ರಕಟಿಸಿಸಿ ಗೌರವಿಸಿದೆ.
ಆಕ್ಸಿಯಮ್ -4 ಕಾರ್ಯಾಚರಣೆಯ ಪೈಲಟ್ ಆಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ISS) ಭೇಟಿ ನೀಡಿದ ಮೊದಲ ಭಾರತೀಯ ಇಸ್ರೋ (ISRO) ಗಗನಯಾತ್ರಿ ಎಂಬ ಹೆಗ್ಗಳಿಕೆಗೆ ಶುಕ್ಲಾ ಪಾತ್ರರಾಗಿದ್ದಾರೆ.
ಜೂನ್ 2025 ರಲ್ಲಿ ಅವರು ಐಸಿಸ್‌ಗೆ ಭೇಟಿ ನೀಡಿದ ಮೊದಲ ಭಾರತೀಯ ಮತ್ತು ರಾಕೇಶ್ ಶರ್ಮಾ ನಂತರ ಬಾಹ್ಯಾಕಾಶಕ್ಕೆ ಪ್ರಯಾಣಿಸಿದ ಎರಡನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಇತಿಹಾಸ ನಿರ್ಮಿಸಿದ್ದರು.




