ಭಾರತ-ಚೀನಾ ಸಮ್ಮತಿ: ಕೈಲಾಸ ಮಾನಸ ಸರೋವರ ಯಾತ್ರೆ ಮತ್ತೆ ಆರಂಭ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಡೋಕ್ಲಾಮ್ ಸಂಘರ್ಷದ ನಂತರ ನಿಲ್ಲಿಸಲಾಗಿದ್ದ ಕೈಲಾಸ ಮಾನಸ ಸರೋವರ ಯಾತ್ರೆಯನ್ನು ಮತ್ತೆ ಪುನರಾರಂಭಿಸಲು ಭಾರತ ಮತ್ತು ಚೀನಾ ಒಪ್ಪಿಕೊಂಡಿವೆ ಎಂದು ವಿದೇಶಾಂಗ ಸಚಿವಾಲಯ ಸೋಮವಾರ ತಿಳಿಸಿದೆ.

ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಅವರು ಜನವರಿ 26-27 ರಂದು ಬೀಜಿಂಗ್‌ಗೆ ಭೇಟಿ ನೀಡಿ ಉಭಯ ದೇಶಗಳ ವಿದೇಶಾಂಗ ಕಾರ್ಯದರ್ಶಿ-ಉಪ ವಿದೇಶಾಂಗ ಸಚಿವರ ಕಾರ್ಯವಿಧಾನ ಸಭೆಯಲ್ಲಿ ಭಾಗವಹಿಸಿದ್ದರು.

ಅಕ್ಟೋಬರ್‌ನಲ್ಲಿ ಕಜಾನ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ನಡುವೆ ಮಾಡಿಕೊಂಡ ಒಪ್ಪಂದಗಳಿಗೆ ಅನುಗುಣವಾಗಿ ನಡೆದ ಈ ಸಭೆಯಲ್ಲಿ, ಸಂಬಂಧಗಳನ್ನು ಸ್ಥಿರಗೊಳಿಸಲು ಮತ್ತು ಪುನರ್ನಿರ್ಮಿಸಲು ಮಹತ್ವದ ಕ್ರಮಗಳನ್ನು ತೆಗೆದುಕೊಳ್ಳಲು ಎರಡೂ ಕಡೆಯವರು ಒಪ್ಪಿಕೊಂಡಿರುವುದಾಗಿ ವಿದೇಶಾಂಗ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

MEA ಯ ಅಧಿಕೃತ ಪ್ರಕಟಣೆಯ ಪ್ರಕಾರ, ಸಭೆಯಲ್ಲಿ ತೆಗೆದುಕೊಳ್ಳಲಾದ ಪ್ರಮುಖ ನಿರ್ಧಾರವೆಂದರೆ 2025 ರ ಬೇಸಿಗೆಯಲ್ಲಿ ಕೈಲಾಸ ಮಾನಸ ಸರೋವರ ಯಾತ್ರೆಯನ್ನು ಪುನರಾರಂಭಿಸಲು ಉಭಯ ದೇಶಗಳು ಒಪ್ಪಿಕೊಂಡಿವೆ.

ಕೈಲಾಸ ಮಾನಸ ಸರೋವರವು ಟಿಬೆಟ್ ಪ್ರದೇಶದಲ್ಲಿದೆ. ಈ ಪ್ರಯಾಣವನ್ನು ಕಳೆದ ಐದು ವರ್ಷಗಳಿಂದ ಮುಚ್ಚಲಾಗಿದೆ, ಈಗ ಅದನ್ನು ಪುನರಾರಂಭಿಸಲು ಒಪ್ಪಿಗೆ ನೀಡಲಾಗಿದೆ.

ಇದಲ್ಲದೆ, ಪರಸ್ಪರರ ದೇಶದಿಂದ ಹರಿಯುವ ನದಿಗಳ ಸಹಕಾರವನ್ನು ಹೆಚ್ಚಿಸಲು ಮತ್ತು ಗಡಿ ವ್ಯಾಪಾರಕ್ಕಾಗಿ ನಾಥುಲಾವನ್ನು ತೆರೆಯಲು ಎರಡೂ ದೇಶಗಳು ಸಹ ಒಪ್ಪಿಕೊಂಡಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!