ಹೊಸದಿಗಂತ ಡಿಜಿಟಲ್ ಡೆಸ್ಕ್:
ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಇನ್ಫೋಸಿಸ್ ಸಹ ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್ ಸೇರಿದಂತೆ 18 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.
ಬೆಂಗಳೂರಿನ 71ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ನಿರ್ದೇಶನದ ಮೇರೆಗೆ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಿಂದನ್ ರಂಗರಾಜನ್, ರಂಗರಾಜನ್ ಶ್ರೀಧರ್ ವಾರಿಯರ್, ಸಂಧ್ಯಾ ವಿಶ್ವೇಶ್ವರಯ್ಯ, ಹರಿ ಕೆವಿಎಸ್, ದಾಸಪ್ಪ, ಹೇಮಲತಾ ಮಹಿತಿ, ಚಟ್ಟೋಪಾಧ್ಯಾಯ ಕೆ. ಪ್ರದೀಪ್ ಡಿ.ಸಾವರ್ ಮತ್ತು ಮನೋಹರನ್ ಮತ್ತಿತರರನ್ನು ಆರೋಪಿಗಳಾಗಿ ಹೆಸರಿಸಲಾಗಿದೆ.
ಬೋವಿ ಸಮುದಾಯಕ್ಕೆ ಸೇರಿದ ದೂರುದಾರ ದುರ್ಗಪ್ಪ ಅಧ್ಯಾಪಕರಾಗಿದ್ದರು. 2014 ರಲ್ಲಿ ತನ್ನನ್ನು ಹನಿ ಟ್ರ್ಯಾಪ್ ಪ್ರಕರಣದಲ್ಲಿ ತಪ್ಪಾಗಿ ಸಿಲುಕಿಸಿ ವಜಾ ಮಾಡಲಾಗಿದೆ. ಅಷ್ಟೇ ಅಲ್ಲದೇ ಕ್ರಿಸ್ ಗೋಪಾಲಕೃಷ್ಣನ್ ಸೇರಿ 18 ಮಂದಿ 2008 ರಿಂದ 2025ರ ವರೆಗೆ ಜಾತಿನಿಂದನೆ ದೌರ್ಜನ್ಯ ನಡೆಸುತ್ತಾ ಬಂದಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.